ಬೆಂಗಳೂರು: ಕರ್ನಾಟಕದಲ್ಲಿ ಮತಗಳ್ಳತನ ನಡೆದಿದೆ ಎಂದು ಆರೋಪ ಮಾಡಿರುವ ರಾಹುಲ್ ಗಾಂಧಿ, ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ‘ನಮ್ಮ ಮತ, ನಮ್ಮ ಹಕ್ಕು, ನಮ್ಮ ಹೋರಾಟ’ ಎನ್ನುವ ಸಮಾವೇಶದಲ್ಲಿ ಪಾಲ್ಗೊಂಡಿದ್ದಾರೆ.

ಸಂವಿಧಾನ ಪುಸ್ತಕ ತೋರಿಸುತ್ತಾ ಭಾಷಣ ಆರಂಭಿಸಿದ ರಾಹುಲ್, ಬಿಜೆಪಿ ನಾಯಕರು ಪವಿತ್ರ ಗ್ರಂಥದ ಮೇಲೆ ಪ್ರಹಾರ ಮಾಡಿದ್ದಾರೆ, ಸಂವಿಧಾನವನ್ನು ಮುಗಿಸುವ ಹುನ್ನಾರ ಮಾಡಿದ್ದಾರೆ. ಸಮೀಕ್ಷೆಯ ಪ್ರಕಾರ ಕಳೆದ ಲೋಕಸಭಾ ಕ್ಷೇತ್ರದಲ್ಲಿ 16 ಕ್ಷೇತ್ರಗಳನ್ನು ನಾವು ಗೆಲ್ಲುತ್ತೇವೆ ಎನ್ನಲಾಗಿತ್ತು, ಆದರೆ ನಾವು ಗೆದ್ದಿದ್ದು 9 ಕ್ಷೇತ್ರಗಳಲ್ಲಿ ಮಾತ್ರ.

‘ಬೆಂಗಳೂರು ಕೇಂದ್ರದ ಮಹಾದೇವಪುರ ಕ್ಷೇತ್ರದ ಫಲಿತಾಂಶವನ್ನು ಸಮೀಕ್ಷೆ ಮಾಡಿದಾಗ ಚುನಾವಣಾ ಆಯೋಗ ಮತ್ತು ಬಿಜೆಪಿ ಒಟ್ಟಾಗಿ ಚುನಾವಣೆಯಲ್ಲಿ ಮೋಸ ಮಾಡಿದೆ. ಆರು ಮತಗಳಲ್ಲಿ ಒಂದು ಮತ ಕಳ್ಳತನ ಮಾಡಿದ್ದಾರೆ. ಭಾವಚಿತ್ರವಿಲ್ಲದ 4 ಸಾವಿರ ಪ್ರಕರಣಗಳು ದೊರೆತಿವೆ. ಒಬ್ಬನೇ ಮತದಾರನಿಂದ ಹಲವು ರಾಜ್ಯಗಳಲ್ಲಿ ಮತದಾನವಾಗಿದೆ’ ಎಂದು ಆರೋಪಿಸಿದ್ದಾರೆ.

‘ಈ ಕಳ್ಳತನ ಕರ್ನಾಟಕದಲ್ಲಿ ಮಾತ್ರವಲ್ಲ ದೇಶದಾದ್ಯಂತ ನಡೆದಿದೆ. ಚುನಾವಣಾ ಆಯೋಗ ಬಿಜೆಪಿ ಪರವಾಗಿ ಕೆಲಸ ಮಾಡುತ್ತಿದೆ. ಒಂದು ಕ್ಷೇತ್ರದಲ್ಲಿ ನಡೆದ ಕಳ್ಳತನದ ಬಗ್ಗೆ ಪರಿಶೀಲನೆ ಮಾಡಿದ್ದೇವೆ, ರಾಜ್ಯದಲ್ಲಿ ಅನೇಕ ಕ್ಷೇತ್ರಗಳಲ್ಲಿ ಮತಗಳ್ಳತನ ನಡೆದಿದೆ ಎನ್ನುವುದನ್ನು ಸಾಬೀತು ಮಾಡಬಲ್ಲೆವು.

‘ನರೇಂದ್ರ ಮೋದಿ ಪ್ರಧಾನಿ 25 ಸೀಟುಗಳಿಂದ ಪ್ರಧಾನ ಮಂತ್ರಿಯಾಗಿದ್ದಾರೆ. ಸದ್ಯ ಒಂದು ಸೀಟಿನಲ್ಲಿ ಕಳ್ಳತನವಾಗಿದೆ ಎನ್ನುವುದನ್ನು ಸಾಬೀತು ಮಾಡಿದ್ದೇವೆ. ಎಲೆಕ್ಟ್ರಾನಿಕ್ ಮತಯಂತ್ರದ ಅಂಕಿ ಅಂಶ ಸಿಕ್ಕರೆ ಮೋದಿಯರವು ಮೋಸದಿಂದ ಪ್ರಧಾನಿಯಾದ ಬಗ್ಗೆ ಸಾಕ್ಷಿ ಸಮೇತ ತೋರಿಸುತ್ತೇವೆ’ ಎಂದು ಗುಡುಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.