ಕವಿತಾಳ (ರಾಯಚೂರು ಜಿಲ್ಲೆ): ತಾಲ್ಲೂಕಿನ ಸುಂಕನೂರ ಗ್ರಾಮದಲ್ಲಿಸ್ಮಶಾನ ಜಾಗದ ಕೊರತೆಯಿಂದಾಗಿ ರಸ್ತೆ ಬದಿಯಲ್ಲೇ ಶವ ಸಂಸ್ಕಾರ ಮಾಡಲಾಯಿತು.

ಗ್ರಾಮದ ಮುತ್ತಮ್ಮ ಯಮನಪ್ಪ ಎಂಬ ಮಹಿಳೆ ಮೃತಪಟ್ಟಿದ್ದರು. ಗ್ರಾಮದಲ್ಲಿ ಸ್ಮಶಾನ ಇಲ್ಲದ್ದರಿಂದ ರಸ್ತೆ ಬದಿ ಶವ ಸಂಸ್ಕಾರ ಮಾಡಲು ಮೃತಳ ಕುಟುಂಬ ತಯಾರಿ ಮಾಡಿಕೊಂಡಿದ್ದನ್ನು ಗ್ರಾಮದ ಕೆಲವರು ಮಸ್ಕಿ ತಹಶೀಲ್ದಾರ್ ಬಲರಾಮ ಕಟ್ಟಿಮನಿ ಅವರಿಗೆ ಮಾಹಿತಿ ನೀಡಿದರು. ಅಧಿಕಾರಿಗಳು ಸ್ಥಳಕ್ಕೆ ಬರುವಷ್ಟರಲ್ಲಿ ರಸ್ತೆ ಬದಿಯೇ ಶವಸಂಸ್ಕಾರ ನಡೆಸಲಾಗಿತ್ತು.

ನಂತರ ಗ್ರಾಮಕ್ಕೆ ಬಂದು ಗ್ರಾಮಸ್ಥರ ಸಭೆ ನಡೆಸಿದ ಕಂದಾಯ ನಿರೀಕ್ಷಕ ಭೂಪತಿ ಮತ್ತು ಗ್ರಾಮಲೆಕ್ಕಿಗ ಬಸವರಾಜ, ‘ಗ್ರಾಮದ ಸರ್ವೇ ನಂ. 20ರಲ್ಲಿ ಸರ್ಕಾರಿ ಜಮೀನು ಲಭ್ಯವಿದ್ದು ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಒಂದು ಎಕರೆ ಜಾಗವನ್ನು ಸ್ಮಶಾನಕ್ಕೆ ಮಂಜೂರು ಮಾಡಲಾಗುವುದು’ ಎಂದರು.

‘ಈ ಹಿಂದೆ ಗ್ರಾಮಸ್ಥರು ಸ್ಮಶಾನಕ್ಕಾಗಿ ಬಳಸುತ್ತಿದ್ದ ಜಮೀನು ವ್ಯಕ್ತಿಯೊಬ್ಬರ ಹೆಸರಿನಲ್ಲಿದ್ದು, ಅವರು ಶವ ಸಂಸ್ಕಾರಕ್ಕೆ ಆಸ್ಪದ ನೀಡುತ್ತಿಲ್ಲ. ಬೇರೆಡೆ ಎರಡು ಎಕರೆ ಜಮೀನು ನೀಡಿದರೆ ಅನುಕೂಲವಾಗುತ್ತದೆ’ ಎಂದು ಗ್ರಾಮದ ಮರಿದೇವ, ಈರಣ್ಣ, ಬಸವರಾಜ ಮನವಿ ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.