ರಾಯಚೂರು: ರಾಯಚೂರು ಮತ್ತು ಕೊಪ್ಪಳ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ನಲ್ಲಿ ಖಾಲಿ ಇರುವ ಕಲ್ಯಾಣ ಕರ್ನಾಟಕ ಮತ್ತು ಉಳಿಕೆ ಮೂಲ ವೃಂದದ ನೇಮಕಾತಿ ಪ್ರಕಟಣೆ ಹಾಗೂ ಹುದ್ದೆಗಳ ಭರ್ತಿಗೆ ಮೌಖಿಕ ಸಂದರ್ಶನ ನಡೆಸಿರುವುದು ನಿಯಮಬಾಹಿರ. ಕೂಡಲೇ ನೇಮಕಾತಿಗಳನ್ನು ರದ್ದುಡಿಸಿ ಹೊಸ ರೋಸ್ಟರ್ ಬಿಂದು ಆಧಾರದಲ್ಲಿ ನೇಮಕಾತಿ ನಡೆಸಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಕೋರ್ ಕಮಿಟಿ ಸದಸ್ಯ ರವೀಂದ್ರನಾಥ ಪಟ್ಟಿ ಒತ್ತಾಯಿಸಿದರು.

ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶಗಳನ್ನು ಉಲ್ಲಂಘಿಸಿ ನೇಮಕಾತಿ ಪ್ರಕ್ರಿಯೆ ನಡೆಸಲಾಗುತ್ತಿದೆ. ಕೂಡಲೇ ಎಲ್ಲಾ ಸಂದರ್ಶನಗಳನ್ನು ರದ್ದುಪಡಿಸಿ ಹೊಸ ರೋಸ್ಟರ್ ಬಿಂದುಗಳ ಪ್ರಕಾರ ಪರಿಷ್ಕೃತ ಅಧಿಸೂಚನೆ ಹೊರಡಿಸಬೇಕು ಎಂದು ಭಾನುವಾರ ಮಾಧ್ಯಮಗೋಷ್ಠಿಯಲ್ಲಿ ಆಗ್ರಹಿಸಿದರು.

ಸರ್ಕಾರ ಮೇ 8ರಂದು ಹೊರಡಿಸಿದ ಆದೇಶದಲ್ಲಿ, ಯಾವುದೇ ನೇಮಕಾತಿ ಅಧಿಸೂಚನೆಯಲ್ಲಿ 3ಕ್ಕಿಂತ ಕಡಿಮೆ ಪರಿಶಿಷ್ಟ ಜಾತಿ ಬಿಂದುಗಳು ಲಭ್ಯವಿದ್ದರೆ ಎಲ್ಲಾ 101 ಪರಿಶಿಷ್ಟ ಜಾತಿಗಳಿಗೆ ಸ್ಪರ್ಧಿಸಲು ಅವಕಾಶ ನೀಡಬೇಕು ಎಂದು ಸೂಚನೆ ನೀಡಿದೆ. ಅದನ್ನು ಪಾಲಿಸದೇ ನೇಮಕಾತಿ ಪ್ರಕ್ರಿಯೆ ಮುಂದುವರಿಸಲಾಗುತ್ತಿದೆ ಎಂದು ದೂರಿದರು.

ಈಗಾಗಲೇ ಒಳಮೀಸಲಾತಿ ಅಳವಡಿಸಿಕೊಂಡು ಸ್ಪರ್ಧಾತ್ಮಕ ಪರೀಕ್ಷೆ ನಡೆಸಿರುವ ಅಧಿಸೂಚನೆಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ನೇಮಕಾತಿ ಅಧಿಸೂಚನೆಗಳನ್ನು ಹಿಂಪಡೆದು ಪರಿಷ್ಕೃತ ಅಧಿಸೂಚನೆ ಹೊರಡಿಸಬೇಕಿತ್ತು. ಆದರೆ ಸರ್ಕಾರದ ಆದೇಶ ಹಾಗೂ ರೋಸ್ಟರ್ ನಿಯಮಗಳನ್ನು ಉಲ್ಲಂಘಿಸಿ ನೇರ ಸಂದರ್ಶನ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಆರೋಪಿಸಿದರು.

ನೇಮಕಾತಿ ಸದಸ್ಯ ಕಾರ್ಯದರ್ಶಿಗಳು 2026ರ ಮೇ 9ರಂದು ಪರಿಷ್ಕೃತ ಸೂಚನೆ ಹೊರಡಿಸಿರುವುದೂ ಕಾನೂನುಬಾಹಿರವಾಗಿದೆ. ಅಂದು ಎರಡನೇ ಶನಿವಾರವಾಗಿದ್ದರಿಂದ ಸರ್ಕಾರಿ ಕಚೇರಿ ಹಾಗೂ ಬ್ಯಾಂಕ್ಗಳಿಗೆ ರಜೆ ಇತ್ತು. ರಜೆ ದಿನದಲ್ಲೇ ತರಾತುರಿಯಲ್ಲಿ ಆದೇಶ ಹೊರಡಿಸಿರುವುದು ಅನುಮಾನಕ್ಕೆ ಕಾರಣವಾಗಿದೆ ಎಂದು ಅವರು ದೂರಿದರು.

ಕೂಡಲೇ ಎಲ್ಲಾ ಸಂದರ್ಶನಗಳನ್ನು ರದ್ದುಪಡಿಸಿ ಹೊಸ ರೋಸ್ಟರ್ ಬಿಂದುಗಳ ಪ್ರಕಾರ ಮರು ಅಧಿಸೂಚನೆ ಹೊರಡಿಸಿ ನೇಮಕಾತಿ ಪ್ರಕ್ರಿಯೆ ಪುನರಾರಂಭಿಸಬೇಕು. ಇಲ್ಲದಿದ್ದರೆ ಹೈಕೋರ್ಟ್ ಹಾಗೂ ರಾಜ್ಯ ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡಗಳ ಆಯೋಗದಲ್ಲಿ ನೇಮಕಾತಿ ಸಮಿತಿ ಅಧ್ಯಕ್ಷರು, ಸದಸ್ಯರು, ಸದಸ್ಯ ಕಾರ್ಯದರ್ಶಿಗಳು ಮತ್ತು ಸಹಕಾರ ಸಂಘಗಳ ಇಲಾಖೆಯ ನಿಬಂಧಕರ ವಿರುದ್ಧ ದೂರು ದಾಖಲಿಸಲಾಗುವುದು ಎಂದು ಎಚ್ಚರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮುಖಂ ಡರಾದ ರಾಜು ಪಟ್ಟಿ, ಎಸ್.ಪ್ರಸಾದ್, ಎಂ.ವಸಂತಕುಮಾರ, ಕೆ.ಯಲ್ಲಪ್ಪ, ಚಂದ್ರಶೇಖರ, ನರಸಿಂಹಲು, ಮಲ್ಲೇಶ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-32-1485002370

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.