ನವದೆಹಲಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಹೆಚ್ಚುವರಿ ಮೀಸಲಾತಿ ನೀಡುವ ‘ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಾಯ್ದೆ- 2022’ ಅನ್ನು ಸಂವಿಧಾನದ ಒಂಬತ್ತನೇ ಪರಿಚ್ಛೇದಕ್ಕೆ ಸೇರಿಸುವಂತೆ ರಾಯಚೂರು ಸಂಸದ ಜಿ.ಕುಮಾರ ನಾಯಕ ಆಗ್ರಹಿಸಿದರು.

ಲೋಕಸಭೆಯಲ್ಲಿ ಗುರುವಾರ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ‘ಈ ಕಾಯ್ದೆಯನ್ನು ಒಂಬತ್ತನೇ ಪರಿಚ್ಛೇದದಲ್ಲಿ ಸೇರಿಸುವ ಪ್ರಸ್ತಾವ ಇನ್ನೂ ಕೇಂದ್ರ ಸರ್ಕಾರದ ಮಟ್ಟದಲ್ಲಿ ಬಾಕಿಯಿರುವುದರಿಂದ ರಾಜ್ಯದ ಲಕ್ಷಾಂತರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರಿಗೆ ನ್ಯಾಯ ಹಾಗೂ ಸಮರ್ಪಕ ಪ್ರತಿನಿಧಿತ್ವ ದೊರಕುವಲ್ಲಿ ವಿಳಂಬವಾಗುತ್ತಿದೆ’ ಎಂದರು.

ಕಾಯ್ದೆಯನ್ನು ಒಂಬತ್ತನೇ ಪರಿಚ್ಛೇದದಲ್ಲಿ ಸೇರಿಸುವ ಪ್ರಸ್ತಾವವನ್ನು ಕರ್ನಾಟಕ ಸರ್ಕಾರವು ಗೃಹ ಸಚಿವಾಲಯಕ್ಕೆ ಕಳುಹಿಸಿತ್ತು. ಗೃಹ ಸಚಿವಾಲಯವು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದಿಂದ ಅಭಿಪ್ರಾಯ ಕೇಳಿದೆ. ಮೂರು ವರ್ಷಗಳಿಂದ ಪ್ರಸ್ತಾವ ನನೆಗುದಿಗೆ ಬಿದ್ದಿದೆ. ಈ ಬಗ್ಗೆ ಕೇಂದ್ರ ಸರ್ಕಾರ ತುರ್ತು ಗಮನ ಹರಿಸಬೇಕು ಎಂದು ಅವರು ಆಗ್ರಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.