ಮಸ್ಕಿ: ಕ್ರೀಡೆಗಳು ಯುವಕರ ದೈಹಿಕ ಹಾಗೂ ಮಾನಸಿಕ ಸಾಮರ್ಥ್ಯವನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತವೆ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಹೇಳಿದರು.

ತಾಲ್ಲೂಕಿನ ಹಡಗಲಿ ತಾಂಡಾದಲ್ಲಿ ಗುರುವಾರ ಆಯೋಜಿಸಿದ್ದ ಡಿಕೆ ಪ್ರಿಮಿಯರ್ ಲೀಗ್ ಕ್ರಿಕೆಟ್ ಟೂರ್ನಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಕಬಡ್ಡಿ, ಕೊಕ್ಕೊ ಮುಂತಾದ ಗ್ರಾಮೀಣ ಕ್ರೀಡೆಗಳು ನಮ್ಮ ಸಂಸ್ಕೃತಿ ಮತ್ತು ಪರಂಪರೆಯ ಅವಿಭಾಜ್ಯ ಅಂಗವಾಗಿವೆ. ಇವುಗಳನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಯುವಕರ ಮೇಲಿದೆ ಎಂದರು.

ಇತ್ತೀಚಿನ ದಿನಗಳಲ್ಲಿ ಕ್ರಿಕೆಟ್ ಕ್ರೀಡೆಗೆ ಯುವಕರಲ್ಲಿ ಹೆಚ್ಚು ಒಲವು ಹೆಚ್ಚುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿಯೂ ಲೀಗ್ ಮಾದರಿಯ ಪಂದ್ಯಗಳು ನಡೆಯುತ್ತಿರುವುದು ಕ್ರೀಡೆಗಳ ಅಭಿವೃದ್ಧಿಗೆ ಉತ್ತಮ ಸೂಚನೆ ಎಂದು ಹೇಳಿದರು. ಯುವಕರು ಕ್ರಿಕೆಟ್ ಜೊತೆಗೆ ಸ್ಥಳೀಯ ಕ್ರೀಡೆಗಳಿಗೂ ಸಮಾನ ಮಹತ್ವ ನೀಡಿ, ಅವುಗಳನ್ನು ಜೀವಂತವಾಗಿಡಬೇಕು ಎಂದರು.

ಟೂರ್ನಿಯನ್ನು ಬ್ಯಾಟಿಂಗ್ ಮಾಡುವ ಮೂಲಕ ಉದ್ಘಾಟಿಸಿದ ಅವರು, ಯುವಕರೊಂದಿಗೆ ಕೆಲಕಾಲ ಆಟವಾಡಿ ಎಲ್ಲರ ಗಮನ ಸೆಳೆದರು. ಸತತ ಸಿಕ್ಸರ್ಗಳನ್ನು ಹೊಡೆದು ಪ್ರೇಕ್ಷಕರ ಚಪ್ಪಾಳೆ ಗಳಿಸಿದರು. ಈ ಸಂದರ್ಭದಲ್ಲಿ ಮುಖಂಡ ಮಲ್ಲಿಕಾರ್ಜುನ ನೆಕ್ಕುಂಟಿ ಸೇರಿದಂತೆ ಅನೇಕರು ಉಪಸ್ಥಿತರಿದ್ದು, ಕ್ರೀಡಾಪಟುಗಳಿಗೆ ಶುಭ ಹಾರೈಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260410-32-1466038348

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.