ರಾಯಚೂರು: ‘ಪರಿಶಿಷ್ಟ ಪಂಗಡ ಸಮುದಾಯಕ್ಕೆ ಶೇ 7ರಷ್ಟು ಮೀಸಲಾತಿ ಒದಗಿಸುವಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ವಿಫಲವಾಗಿದ್ದು, ಸಮುದಾಯಕ್ಕೆ ಅನ್ಯಾಯಮಾಡಿದೆ. ಕೂಡಲೇ ಹೈಕೋರ್ಟ್ನಲ್ಲಿರುವ ತಡೆಯಾಜ್ಞೆ ತೆರವುಗೊಳಿಸಿ ಎಸ್ಟಿ ಸಮುದಾಯಕ್ಕೆ ಶೇ7 ಮೀಸಲು ಜಾರಿಗೊಳಿಸದೇ ಹೋದಲ್ಲಿ ರಾಜ್ಯದಾದ್ಯಂತ ಸಮುದಾಯದಿಂದ ಹೋರಾಟ ನಡೆಯಲಿದೆ’ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಹೇಳಿದರು.

ಈ ಹಿಂದೆ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಎಸ್ಸಿ ಮತ್ತು ಎಸ್ಟಿ ಸಮುದಾಯಗಳಿಗೆ ಮೀಸಲಾತಿ ಹೆಚ್ಚಿಸಲು ನ್ಯಾಯಮೂರ್ತಿ ನಾಗಮೋಹನದಾಸ್ ನೇತೃತ್ವದ ಆಯೋಗ ರಚಿಸಿತ್ತು. ಆಯೋಗ ಎಸ್ಸಿ ಸಮುದಾಯಕ್ಕೆ ಶೇ 17 ರಷ್ಟು, ಎಸ್ಟಿ ಸಮುದಾಯಕ್ಕೆ ಶೇ7 ರಷ್ಟು ಮೀಸಲು ಹೆಚ್ಚಿಸಲು ಶಿಫಾರಸ್ಸು ಮಾಡಿತ್ತು ಎಂದು ಭಾನುವಾರ ಮಾಧ್ಯಮ ಗೋಷ್ಠಿಯಲ್ಲಿ ವಿವರಿಸಿದರು.

‘ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದಾಗ ಕೇಂದ್ರಕ್ಕೆ ಶಿಫಾರಸು ಮಾಡಿದ್ದರು. ಆದರೆ ಕಾಂಗ್ರೆಸ್ ಸರ್ಕಾರ ಬಿಜೆಪಿ ವಿರುದ್ಧ ಅಪಪ್ರಚಾರ ಮಾಡಿ ಮೀಸಲು ಹೆಚ್ಚಿಸುವುದನ್ನು ವಿರೋಧಿಸಿ ತಪ್ಪು ಅಭಿಪ್ರಾಯ ಜನರಲ್ಲಿ ಹರಡಲು ಕಾರಣವಾಯಿತು. ಆದರೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೂ ಮೀಸಲು ಹೆಚ್ಚಿಸಲು ಮುಂದಾಗಲೇ ಇಲ್ಲ. ಕಾಂಗ್ರೆಸ್ ಪಕ್ಷ ಬೆಂಬಲಿತರೇ ಎಸ್ಸಿಎಸ್ಟಿ ಸಮೂದಾಯಕ್ಕೆ ಮೀಸಲು ಹೆಚ್ಚಿಸಿರುವುದನ್ನು ವಿರೋಧಿಸಿ ಹೈಕೋರ್ಟ್ನಲ್ಲಿ ತಡೆಯಾಜ್ಞೆ ತಂದರು. ಆದರೆ ಸರ್ಕಾರ ವಕೀಲರು ಹೈಕೋರ್ಟ್ ವಿಚಾರಣೆಗೆ ಹಾಜರಾಗದೇ ಇರುವದರಿಂದ ಮೀಸಲು ಹೆಚ್ಚಿಸಲು ಸಾಧ್ಯವಾಗಲೇ ಇಲ್ಲ’ ಎಂದು ಅಸಮಾಧಾನ ಹೊರಹಾಕಿದರು.

ಶಾಸಕ ರಮೇಶ ಜಾರಕಿಹೊಳಿ ಮಾತನಾಡಿ, ‘ರಾಜ್ಯದ ಮುಖ್ಯಮಂತ್ರಿಯಾಗಲಿರುವ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಅವರು ಹೈಕೊರ್ಟ್ನಲ್ಲಿರುವ ತಡೆಯಾಜ್ಞೆ ತೆರವುಗೊಳಿಸಿ ಕೇಂದ್ರಕ್ಕೆ ಮೀಸಲು ಹೆಚ್ಚಿಸಲು ಶಿಫಾರಸು ಮಾಡಲಿ. ಕೇಂದ್ರ ಬಳಿ ನಿಯೋಗ ತೆರಳಿ ಮನವಿ ಮಾಡುವ ಜವಾಬ್ದಾರಿ ನಮ್ಮದಾಗಿದೆ. ಆದರೆ ಸುಳ್ಳು ಹೇಳಿ ಜನರನ್ನು ದಾರಿತಪ್ಪಿಸುವ ಕೆಲಸ ಮಾಡಬಾರದು’ ಎಂದು ಹೇಳಿದರು.

ಮಾಜಿ ಸಚಿವ ರಾಜುಗೌಡ ಮಾತನಾಡಿ, ‘ಎಸ್ಸಿ,ಎಸ್ಟಿ ಸಮು ದಾಯಗಳಿಗೆ ಹೆಚ್ಚಿಸಿರುವ ಮೀಸಲು ಅನುಷ್ಠಾನಗೊಳಿಸಲು ಹೈಕೋರ್ಟ್ ತಡೆಯಾಜ್ಞೆ ತೆರವುಗೊಳಿಸಲು ಸರ್ಕಾರ ಮುಂದಾಗಬೇಕಿದೆ. ನಮ್ಮ ಸಮಾಜದ 15 ಜನ ಶಾಸಕರನ್ನು ಬಲಭೀಮರೆಂದು ಜನರು ಆಯ್ಕೆ ಮಾಡಿದ್ದಾರೆ. ಅವರೇನೂ ಮಾಡಲಿಲ್ಲ. ಸದನದಲ್ಲಿ ಮೀಸಲಾತಿ ಹೆಚ್ಚಳದ ಕುರಿತು ಯಾರೊಬ್ಬರೂ ಪ್ರಶ್ನಿಸಲೇ ಇಲ್ಲ’ ಎಂದು ಟೀಕಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸಂಸದ ಬಿ.ವಿ.ನಾಯಕ, ಸೋಮಲಿಂಗಪ್ಪ, ಮಾಜಿ ಶಾಸಕ ಪ್ರತಾಪಗೌಡ ಪಾಟೀಲ, ಗಂಗಾಧರ ನಾಯಕ, ತಿಪ್ಪರಾಜ ಹವಲ್ದಾರ, ಓಬಳೇಶ, ಅಪ್ಪಣ್ಣ ಮೈಸೂರು, ರಾಜೇಶ, ಬಿಜೆಪಿ ಎಸ್ಟಿ ಮೋರ್ಚಾ ಅಧ್ಯಕ್ಷ ಹನುಮಂತ, ಭರತ, ಕೊಟ್ರೇಶಪ್ಪ ಕೋರಿ ಸೇರಿದಂತೆ ವಾಲ್ಮೀಕಿ ಸಮಾಜದ ಮುಖಂಡರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-32-1283577114

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.