ಅರಣ್ಯ ಹಾಗೂ ವನ್ಯಜೀವಿ ಕಾಯ್ದೆಗಳ ಕಟ್ಟುನಿಟ್ಟಿನ ನಿಬಂಧನೆಗಳ ಕಾರಣದಿಂದ ಅರಣ್ಯ ವಾಸಿಗಳಿಗೆ ಮೂಲಭೂತ ಸೌಕರ್ಯಗಳನ್ನು ಕೊಡಲಾಗದೆ ಕ್ಯಾಸಲ್ ರಾಕ್ ವನ್ಯಜೀವಿ ವಲಯದಿಂದ 58 ಕುಟುಂಬಗಳು ಸೇರಿ ಕಾಳಿ ಹುಲಿ ಮೀಸಲು ವ್ಯಾಪ್ತಿಯಿಂದ 600 ಕ್ಕೂ ಹೆಚ್ಚಿನ ಕುಟುಂಬಗಳನ್ನು ಸ್ಥಳಾಂತರಿಸಿ ಹುಲಿಗಳಿಗೆ ಮಾನವ ಚಟುವಟಿಕೆ ರಹಿತ ಪ್ರದೇಶಗಳನ್ನು ನಿರ್ಮಿಸಿದ್ದೇವೆಂದು ರಾಜ್ಯ ಸರ್ಕಾರ ಹೇಳಿದೆ. ಆದರೆ ಇದೀಗ ಇದೇ ಅರಣ್ಯ ಪ್ರದೇಶದಲ್ಲಿ ರೈಲ್ವೆ ದ್ವಿಪಥ ಕಾಮಗಾರಿಗೆ ಹಸಿರು ನಿಶಾನೆ ತೋರಲು ಸರ್ಕಾರ ಹೊರಟಿರುವುದು ಸರಿಯಲ್ಲ