ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು–ಹುಬ್ಬಳ್ಳಿ ನಡುವೆ ವಂದೇ ಭಾರತ್‌ ರೈಲು: 26ಕ್ಕೆ ಪ್ರಧಾನಿ ಮೋದಿಯಿಂದ ಚಾಲನೆ

Published 14 ಜೂನ್ 2023, 13:04 IST
Last Updated 14 ಜೂನ್ 2023, 13:04 IST
ಅಕ್ಷರ ಗಾತ್ರ

ನವದೆಹಲಿ: ರೈಲ್ವೆ ಸಚಿವಾಲಯವು ಜೂನ್ 26ರಿಂದ ಬೆಂಗಳೂರು-ಹುಬ್ಬಳ್ಳಿ ಸೇರಿದಂತೆ ಇನ್ನೂ ಐದು ಮಾರ್ಗಗಳಲ್ಲಿ ವಂದೇ ಭಾರತ್ ರೈಲುಗಳ ಸಂಚಾರವನ್ನು ಆರಂಭಿಸಲಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೊ ಕಾನ್ಫರೆನ್ಸ್ ಮೂಲಕ ಸೆಮಿ ಹೈಸ್ಪೀಡ್ ರೈಲುಗಳ ಸಂಚಾರಕ್ಕೆ ಚಾಲನೆ ನೀಡುವ ನಿರೀಕ್ಷೆಯಿದೆ.

ಮುಂಬೈ-ಗೋವಾ, ಬೆಂಗಳೂರು-ಹುಬ್ಬಳ್ಳಿ, ಪಟ್ನಾ-ರಾಂಚಿ, ಭೋಪಾಲ್-ಇಂದೋರ್ ಮತ್ತು ಭೋಪಾಲ್-ಜಬಲ್ಪುರ ಮಾರ್ಗಗಳಲ್ಲಿ ಈ ಐದು ರೈಲುಗಳು ಸಂಚರಿಸಲಿವೆ.

ಒಡಿಶಾದಲ್ಲಿ ನಡೆದ ದುರಂತದ ಹಿನ್ನೆಲೆಯಲ್ಲಿ ರೈಲ್ವೆ ಸಚಿವಾಲಯವು ಮುಂಬೈ-ಗೋವಾ ಮಾರ್ಗದಲ್ಲಿ ವಂದೇ ಭಾರತ್ ರೈಲು ಸಂಚಾರದ ಪ್ರಾರಂಭವನ್ನು ರದ್ದುಗೊಳಿಸಿತ್ತು. ವಂದೇ ಭಾರತ್‌ನ ರೈಲುಗಳು ಐದು ಮಾರ್ಗಗಳಲ್ಲಿ ಒಂದೇ ದಿನ ಕಾರ್ಯಾಚರಣೆ ಆರಂಭಿಸುತ್ತಿರುವುದು ಇದೇ ಮೊದಲು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT