ಗುರುವಾರ, 9 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಉತ್ತಮ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

Published 22 ಸೆಪ್ಟೆಂಬರ್ 2023, 14:05 IST
Last Updated 22 ಸೆಪ್ಟೆಂಬರ್ 2023, 14:05 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ಕರಾವಳಿ, ದಕ್ಷಿಣ ಹಾಗೂ ಉತ್ತರ ಒಳನಾಡು ವ್ಯಾಪ್ತಿಯ ಜಿಲ್ಲೆಗಳಲ್ಲಿ ಶನಿವಾರದಿಂದ ನಾಲ್ಕು ದಿನಗಳ ಕಾಲ ಮೋಡ ಕವಿದ ವಾತಾವರಣ ಇರಲಿದ್ದು ಉತ್ತಮ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ ಜಿಲ್ಲೆಯ ಅಲ್ಲಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಸೂಚನೆ ನೀಡಿದೆ.

ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ ಜಿಲ್ಲೆ ಹಲವೆಡೆ ಮಳೆಯಾಗಲಿದೆ. ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಯಲ್ಲೂ ಸಂಜೆ ಅಥವಾ ರಾತ್ರಿ ವೇಳೆ ಜೋರು ಮಳೆಯಾಗಲಿದೆ ಎಂದು ತಿಳಿಸಿದೆ.

ಶುಕ್ರವಾರ ಬೆಳಿಗ್ಗೆ 8.30ಕ್ಕೆ ಕೊನೆಯಾದಂತೆ ಕಳೆದ 24 ಗಂಟೆ ಅವಧಿಯಲ್ಲಿ ಕಲಬುರಗಿ ಜಿಲ್ಲೆಯ ಚಿಂಚೋಳಿ, ಸುಲೇಪೇಟದಲ್ಲಿ 5 ಸೆಂ.ಮೀ, ಉತ್ತರ ಕನ್ನಡದ ಕದ್ರಾ, ಕಲಬುರಗಿಯ ಚಿತ್ತಾಪುರ, ಯಾದಗಿರಿಯ ಸೈದಾಪುರ, ವಿಜಯಪುರದ ಇಂಡಿಯಲ್ಲಿ 3 ಸೆಂ.ಮೀ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT