ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರಾಜ್ಯದಲ್ಲಿ ಇನ್ನೆರಡು ದಿನ ಸಾಧಾರಣ ಮಳೆ: ಹವಾಮಾನ ಇಲಾಖೆ

Published 28 ಮೇ 2024, 16:05 IST
Last Updated 28 ಮೇ 2024, 16:05 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರ ಕೊಂಚ ತಗ್ಗಿದ್ದು, ಬುಧವಾರ ಹಾಗೂ ಗುರುವಾರ ಕೆಲವು ಭಾಗದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.`

ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಗುಡುಗು ಸಹಿತ ಜೋರು ಮಳೆಯಾಗಲಿದೆ. ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ. ಈ ಜಿಲ್ಲೆಗಳಲ್ಲಿ 30– 40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಬೆಳಗಾವಿ, ಧಾರವಾಡ, ಹಾವೇರಿ, ಚಾಮರಾಜನಗರ, ಮೈಸೂರು, ರಾಮನಗರ ಜಿಲ್ಲೆಯ ಅಲ್ಲಲ್ಲಿ ಚದುರಿದಂತೆ ಮಳೆಯಾಗಲಿದೆ ಎಂದು ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ಅಥವಾ ರಾತ್ರಿ ವೇಳೆ ಸಾಧಾರಣ ಮಳೆಯಾಗಲಿದೆ. ಕೆಲವೊಮ್ಮೆ ಮೇಲ್ಮೈ ಗಾಳಿಯು ಪ್ರಬಲವಾಗಿ ಬೀಸುವ ಸಾಧ್ಯತೆಯಿದೆ ಎಂದು ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT