ಬೆಂಗಳೂರು: ‘ಮಳೆ ಹಾನಿಯಿಂದ ಆಗಿರುವ ನಷ್ಟಕ್ಕೆ ಪರಿಹಾರ ನೀಡಲು ಅನುದಾನ ಕೊರತೆ ಇಲ್ಲ. ಹೆಚ್ಚುವರಿ ಪರಿಹಾರ ಒದಗಿಸುವ ಕುರಿತು ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮಳೆ ಹಾನಿ ಹಾಗೂ ಪರಿಹಾರ ಕ್ರಮಗಳ ಕುರಿತು ಗೃಹ ಕಚೇರಿ ಕೃಷ್ಣಾದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಸೋಮವಾರ ನಡೆಸಿದ ವಿಡಿಯೊ ಸಂವಾದದಲ್ಲಿ ಮಾತನಾಡಿದ ಮುಖ್ಯಮಂತ್ರಿ, ‘ಅತಿವೃಷ್ಟಿಯಿಂದ ಉಂಟಾಗಿರುವ ಮೂಲಸೌಕರ್ಯ ಹಾನಿ ದುರಸ್ತಿಗೆ ಎಸ್ಡಿಆರ್ಎಫ್ ಅಡಿ ಅವಕಾಶವಿದೆ. ರೈತರ ಜಮೀನುಗಳಿಗೆ ಉಂಟಾಗಿರುವ ಹಾನಿಗೂ ಪರಿಹಾರ ಒದಗಿಸಲು ಅನುದಾನ ಲಭ್ಯವಿದೆ’ ಎಂದರು.

‘ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿ ಮತ್ತು ತಹಶೀಲ್ದಾರ್ ವಿಪತ್ತು ನಿಧಿ ಅಡಿ ₹ 1,385.21 ಕೋಟಿ ಅನುದಾನ ಲಭ್ಯವಿದೆ’ ಎಂದರು.

‘ಹಿಂಗಾರು ಬಿತ್ತನೆಗೆ ಅಗತ್ಯವಾದ ಬಿತ್ತನೆ ಬೀಜ, ರಸಗೊಬ್ಬರ ಸೇರಿದಂತೆ ಈಗಲೇ ತಯಾರಿ ಮಾಡಬೇಕು’ ಎಂದೂ ಅವರು ಅಧಿಕಾರಿಗಳಿಗೆ ಅವರು ನಿರ್ದೇಶನ ನೀಡಿದರು.
.ಅತಿವೃಷ್ಟಿಯಿಂದ ಹಾನಿ; ಬೆಳೆ, ಮನೆಗೆ ತಕ್ಷಣ ಪರಿಹಾರ ಒದಗಿಸಿ: ಸಿದ್ದರಾಮಯ್ಯ ಸೂಚನೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.