ಬೆಂಗಳೂರು: ಕರಾವಳಿ ಹೊರತುಪಡಿಸಿ ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಶುಕ್ರವಾರ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ರಾಮನಗರ, ಶಿವಮೊಗ್ಗ, ವಿಜಯನಗರ ಹಾಗೂ ಮೈಸೂರಿನಲ್ಲಿ ಮಳೆಯಾಗುವ ಸಂಭವವಿದೆ. ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿಯಲ್ಲಿ ಉಷ್ಣ ವಾತಾವರಣ ಇರಲಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಶನಿವಾರದಿಂದ, ಉತ್ತರ ಕನ್ನಡದಲ್ಲಿ ಸೋಮವಾರದಿಂದ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಇದೇ 17ರವರೆಗೂ ಮಳೆಯಾಗಬಹುದು ಎಂದು ಇಲಾಖೆ ತಿಳಿಸಿದೆ.

ಗುರುವಾರ ಬೆಳಿಗ್ಗೆ 8.30ಕ್ಕೆ ಅನ್ವಯಿಸಿದಂತೆ ಹಿಂದಿನ 24 ಗಂಟೆಗಳ ಅವಧಿಯಲ್ಲಿ ಕಲಬುರಗಿಯಲ್ಲಿ ಗರಿಷ್ಠ (40.1 ಡಿಗ್ರಿ ಸೆಲ್ಸಿಯಸ್) ಉಷ್ಣಾಂಶ ವರದಿಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.