ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇರಳಕ್ಕೆ ಮುಂಗಾರು ಪ್ರವೇಶ: ಕೊಡಗು ಜಿಲ್ಲೆಯಲ್ಲಿ ತುಂತುರು ಮಳೆ

ದಟ್ಟ ಮೋಡ ಕವಿದ ವಾತಾವರಣ
Last Updated 1 ಜೂನ್ 2020, 11:28 IST
ಅಕ್ಷರ ಗಾತ್ರ

ಮಡಿಕೇರಿ: ಕೇರಳ ರಾಜ್ಯಕ್ಕೆ ಮುಂಗಾರು ಮಳೆ ಪ್ರವೇಶಿಸಿದ್ದು, ಕೊಡಗು ಜಿಲ್ಲೆಯಲ್ಲೂ ಸೋಮವಾರ ಮಳೆಯ ವಾತಾವರಣ ಕಂಡುಬಂತು. ಕೇರಳಕ್ಕೆ ಹೊಂದಿಕೊಂಡಿರುವ ಕುಟ್ಟ, ಮಾಕುಟ್ಟ, ಕರಿಕೆಯಲ್ಲಿ ಉತ್ತಮ ಮಳೆಯಾಗಿದೆ.

ಮಡಿಕೇರಿಯಲ್ಲಿ ಮಧ್ಯಾಹ್ನದ ತನಕವೂ ದಟ್ಟವಾದ ಮೋಡ ಕವಿದ ವಾತಾವರಣ ಇತ್ತು. ಆಗಾಗ್ಗೆ ಬಿಡುವು ಕೊಟ್ಟು ತುಂತುರು ಮಳೆ ಸುರಿಯಿತು. ಬಕ್ಕ, ಚೇರಂಬಾಣೆ, ಭಾಗಮಂಡಲ, ತಲಕಾವೇರಿ, ಕೊಡಗರಹಳ್ಳಿ, ಸುಂಟಿಕೊಪ್ಪ, ಮಾದಾಪುರ ವ್ಯಾಪ್ತಿಯಲ್ಲೂ ಉತ್ತಮ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT