ಮೂವರ ಸಾವು:
ಮಳೆಗೆ ಸಂಬಂಧಿಸಿದ ವಿವಿಧ ಪ್ರಕರಣಗಳಲ್ಲಿ ಮೂವರು ಮೃತಪಟ್ಟಿದ್ದಾರೆ. ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಏಚಗಳ್ಳಿಯಲ್ಲಿ ವಿದ್ಯುತ್ ತಂತಿ ತುಳಿದು ಸಿದ್ದರಾಜು (55), ಬೆಳಗಾವಿ ಜಿಲ್ಲೆಯ ಗೋಕಾಕದ ಮಹಾಲಿಂಗೇಶ್ವರ ಕಾಲೊನಿಯಲ್ಲಿ ಸೋಮವಾರ ನಸುಕಿನಲ್ಲಿ ಮನೆ ಗೋಡೆ ಕುಸಿದು, ಮೂರು ವರ್ಷದ ಬಾಲಕಿ ಕೃತಿಕಾ ನಾಗೇಶ ಪೂಜಾರಿ ಹಾಗೂ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಕಂಕಣವಾಡಿ ಗ್ರಾಮದ ರೈತ ಕಲ್ಲಪ್ಪ ಧರೆಪ್ಪ ಅಂಬಿ (65) ಭಾನುವಾರ ಕೃಷ್ಣಾ ನದಿಯಲ್ಲಿ ಈಜುತ್ತ ತಮ್ಮ ಜಮೀನಿಗೆ ಹೋಗುವಾಗ, ನೀರಿನಲ್ಲಿ ಮುಳುಗಿ
ಮೃತಪಟ್ಟಿದ್ದಾರೆ.