ಕಲಬುರಗಿ: ಕಲ್ಯಾಣ ಕರ್ನಾಟಕದ ರಾಯಚೂರು, ಕಲಬುರಗಿ, ಕೊಪ್ಪಳ, ಯಾದಗಿರಿ ಜಿಲ್ಲೆಗಳಲ್ಲಿ ಗುರುವಾರ ಸಾಧಾರಣ ಮಳೆಯಾಗಿದೆ.
ರಾಯಚೂರು ಜಿಲ್ಲೆಯ ವಿವಿಧೆಡೆ ಬುಧವಾರ ರಾತ್ರಿ ಹಾಗೂ ಗುರುವಾರ ಉತ್ತಮವಾಗಿ ಮಳೆಯಾಗಿದೆ. ರಾಯಚೂರು ತಾಲ್ಲೂಕಿನ ಬಿಚ್ಚಾಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿ.ಯದ್ಲಾಪುರು ಗ್ರಾಮದಲ್ಲಿ ಮಳೆಯ ಆರ್ಭಟಕ್ಕೆ ರಸ್ತೆ ಕೊಚ್ಚಿಹೋಗಿದೆ. ದೇವದುರ್ಗ, ಕವಿತಾಳ, ಮಾನ್ವಿ, ಹಟ್ಟಿ ಚಿನ್ನದಗಣಿ ಪ್ರದೇಶದಲ್ಲಿ ಮಳೆಯಾಗಿದೆ.
ಯಾದಗಿರಿ ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಸಾಧಾರಣ ಮಳೆಯಾಗಿದೆ. ನಾರಾಯಣಪುರ, ಹುಣಸಗಿ, ಕೆಂಭಾವಿಯಲ್ಲಿ ತುಂತುರು ಮಳೆಯಾಗಿದ್ದರೆ, ಶಹಾಪುರ, ಸುರಪುರದಲ್ಲಿ ಉತ್ತಮ ಮಳೆಯಾಗಿದೆ.
ಕೊಪ್ಪಳ, ಕುಷ್ಟಗಿ ಹಾಗೂ ಮುನಿರಾಬಾದ್‌ನಲ್ಲಿ ಉತ್ತಮ ಮಳೆಯಾಗಿದೆ. ಬುಧವಾರ ತಡರಾತ್ರಿ ಕುಷ್ಟಗಿ ತಾಲ್ಲೂಕಿನ ತಾವರಗೇರಾ ಹಾಗೂ ಹನುಮಸಾಗರದಲ್ಲಿ ಮಳೆ ಸುರಿದಿದೆ.