ಬುಧವಾರ, 29 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಏಪ್ರಿಲ್‌ 13ರಿಂದ ರಾಜ್ಯದಲ್ಲಿ ಆರು ದಿನ ಮಳೆ ಸಾಧ್ಯತೆ

ರಾಜ್ಯದ ವಿವಿಧ ಜಿಲ್ಲೆಗಳ ಅಲ್ಲಲ್ಲಿ ಏಪ್ರಿಲ್‌ 13ರಿಂದ 18ರವರೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Published 12 ಏಪ್ರಿಲ್ 2024, 16:08 IST
Last Updated 12 ಏಪ್ರಿಲ್ 2024, 16:08 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳ ಅಲ್ಲಲ್ಲಿ ಏಪ್ರಿಲ್‌ 13ರಿಂದ 18ರವರೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

13ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಜೋರು ಮಳೆಯಾಗುವ ಸಾಧ್ಯತೆಯಿದೆ.

ಬಾಗಲಕೋಟೆ, ಧಾರವಾಡ, ಗದಗ, ವಿಜಯಪುರ, ಹಾವೇರಿ, ಕೊಪ್ಪಳ, ಕೊಡಗು, ಯಾದಗಿರಿ, ಶಿವಮೊಗ್ಗ ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್‌’ ನೀಡಲಾಗಿದೆ.

ಉಳಿದ, ಜಿಲ್ಲೆಗಳಲ್ಲಿ ಒಣಹವೆ ಇರುವ ಬಹಳಷ್ಟು ಸಾಧ್ಯತೆಯಿದೆ ಎಂದು ಸೂಚನೆ ನೀಡಿದೆ.

ಏಪ್ರಿಲ್‌ 14ರಿಂದ ಮೂರು ದಿನಗಳ ಕಾಲ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಉಷ್ಣಾಂಶ ತುಸು ಏರಿಕೆ ಕಾಣಲಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಗಾಳಿಯು ಪ್ರತಿ ಗಂಟೆಗೆ 40ರಿಂದ 50 ಕಿ.ಮೀ ಹಾಗೂ 30ರಿಂದ 40 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡು ಒಳನಾಡು ಪ್ರದೇಶದಲ್ಲಿ ಗಾಳಿ ಪ್ರತಿ ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿ ವೇಳೆ ಮಳೆಯಾಗುವ ಸಾಧ್ಯತೆಯಿದೆ.

ಎಲ್ಲೆಲ್ಲಿ ಮಳೆ?

ಶುಕ್ರವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ, ಬೀದರ್‌ ಜಿಲ್ಲೆಯ ಮಂಠಾಳ, ಕಲಬುರಗಿ ಜಿಲ್ಲೆ ನಿಂಬರ್ಗಾ ತಾಂಡಾದಲ್ಲಿ 3 ಸೆಂ.ಮೀ, ವಿಜಯಪುರ ಜಿಲ್ಲೆಯ ಇಂಡಿ, ಕಲಬುರಗಿ ಆಳಂದ, ಬಾಗಲಕೋಟೆಯ ಇಳಕಲ್, ಯಾದಗಿರಿಯ ನಾರಾಯಣಪುರ, ಚಿಕ್ಕಮಗಳೂರಿನ ಬಾಳೆಹೊನ್ನೂರಿನಲ್ಲಿ 2 ಸೆಂ.ಮೀ ಹಾಗೂ ಬೀದರ್ ಜಿಲ್ಲೆಯ ಭಾಲ್ಕಿ, ಕಲಬುರಗಿಯ ಯಡ್ರಾಮಿ, ಬೆಳಗಾವಿಯ ಯಡ್ವಾಡ, ವಿಜಯಪುರದ ಮುದ್ದೇಬಿಹಾಳ, ಚಿಕ್ಕಮಗಳೂರಿನ ಕಳಸದಲ್ಲಿ 1 ಸೆಂ.ಮೀ ಮಳೆಯಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT