ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಕ್ಷಿಣ ಒಳನಾಡಿನ ಹಲವೆಡೆ ಮಳೆ ಸಾಧ್ಯತೆ

Last Updated 1 ಏಪ್ರಿಲ್ 2023, 18:45 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಭಾನುವಾರ ಜೋರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ.

ಸಂಜೆ ಅಥವಾ ರಾತ್ರಿ ವೇಳೆ ಮಳೆ ಸುರಿಯಲಿದೆ. ರಾಜಧಾನಿಯಲ್ಲಿ ಶನಿವಾರ ಉಷ್ಣಾಂಶ ಗರಿಷ್ಠ 35, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದರೆ, ಕಲಬುರಗಿ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 38 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು.

ಶುಕ್ರವಾರ ದಕ್ಷಿಣ ಒಳನಾಡಿನ ಹಲವೆಡೆ ಜೋರು ಮಳೆ ಸುರಿದಿದೆ. ಶನಿವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಕೋಲಾರ ಜಿಲ್ಲೆಯ ರಾಯಲ್ಪಾಡ್‌ನಲ್ಲಿ 7 ಸೆಂ.ಮೀ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ 3 ಸೆಂ.ಮೀ ಮಳೆ ಸುರಿದಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT