ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಧಾರಾಕಾರ ಮಳೆ ಸಾಧ್ಯತೆ: ಹವಾಮಾನ ಇಲಾಖೆ

Published 10 ಮೇ 2024, 14:13 IST
Last Updated 10 ಮೇ 2024, 14:13 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ಮಲೆನಾಡು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಇದೇ 11ರಿಂದ 14ರ ವರೆಗೆ ಗುಡುಗು ಸಹಿತ ಧಾರಾಕಾರ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮೇ 11ರಂದು ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೊಡಗು, ಮೇ 12ರಂದು ಬೀದರ್, ಕಲಬುರಗಿ, ಬೆಳಗಾವಿ, ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೊಡಗು, ಮೇ 13ರಂದು ಬೀದರ್, ಕಲಬುರಗಿ, ಬೆಳಗಾವಿ, ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೊಡಗು, ರಾಮನಗರ, ಮೈಸೂರು, ಮಂಡ್ಯ ಹಾಗೂ ಮೇ 14ರಂದು ವಿಜಯಪುರ ಜಿಲ್ಲೆಗೆ ‘ಯೆಲ್ಲೊ ಅಲರ್ಟ್‌’ ಘೋಷಿಸಲಾಗಿದೆ.

ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ. ಭಾರಿ ಮಳೆಯ ಮುನ್ಸೂಚನೆ ನೀಡಿರುವ ಕೆಲವು ಸ್ಥಳಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ ಹಾಗೂ ಮತ್ತೆ ಕೆಲವು ಕಡೆ 40ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ.

ರಾಜ್ಯದ ಹಲವೆಡೆ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಗರಿಷ್ಠ ತಾಪಮಾನವು 2 ರಿಂದ 3 ಡಿಗ್ರಿ ಸೆಲ್ಸಿಯಸ್‌ನಷ್ಟು ಇಳಿಕೆಯಾಗಲಿದೆ.

ಬೆಂಗಳೂರು ನಗರದಲ್ಲಿ ಮುಂದಿನ ಎರಡು ದಿನ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಪ್ರದೇಶದಲ್ಲಿ ಸಂಜೆ ಅಥವಾ ರಾತ್ರಿ ವೇಳೆ ಮಳೆ ಮುಂದುವರಿಯುವ ಸಾಧ್ಯತೆಯಿದೆ.

ನಗರದಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌ ದಾಖಲಾಗುವ ಸಾಧ್ಯತೆಯಿದೆ. ರಾಜ್ಯದಲ್ಲೇ ಗರಿಷ್ಠ ತಾಪಮಾನ ಶುಕ್ರವಾರ 40.6 ಡಿಗ್ರಿ ಸೆಲ್ಸಿಯಸ್‌ ಬಾಗಲಕೋಟೆ ಜಿಲ್ಲೆಯಲ್ಲಿ ದಾಖಲಾಗಿತ್ತು.

ಮಳೆ ಪ್ರಮಾಣ:

ಕಳೆದ 24 ಗಂಟೆಯಲ್ಲಿ ಬೆಂಗಳೂರು ನಗರ ಜಿಲ್ಲೆಯಲ್ಲಿ 7 ಸೆಂ.ಮೀ, ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ 5 ಸೆಂ.ಮೀ, ಗದಗ ಜಿಲ್ಲೆಯ ಬೆಳಟ್ಟಿ, ಕೊಡಗಿನ ಕುಶಾಲನಗರ, ರಾಮನಗರ ಜಿಲ್ಲೆಯ ಮಾಗಡಿ, ತುಮಕೂರು ಜಿಲ್ಲೆಯ ಬರಗೂರಿನಲ್ಲಿ ತಲಾ 4 ಸೆಂ.ಮೀ, ಮಂಡ್ಯದ ಮದ್ದೂರು, ಕೊಡಗಿನ ನಾಪೋಕ್ಲು, ಮೈಸೂರಿನ ಸರಗೂರು, ಹಾಸನದ ಸಕಲೇಶಪುರ, ಚಿತ್ರದುರ್ಗದ ನಾಯಕನಹಟ್ಟಿ 2, ಯಾದಗಿರಿಯ ನಾರಾಯಣಪುರದಲ್ಲಿ 1 ಸೆಂ.ಮೀ ಮಳೆ ಸುರಿದಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT