ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರಾವಳಿ, ಮಲೆನಾಡು ವ್ಯಾಪ್ತಿಯಲ್ಲಿ ಮಳೆ ಸಾಧ್ಯತೆ

Last Updated 7 ಏಪ್ರಿಲ್ 2023, 20:23 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಾಗಲಕೋಟೆ, ಬೆಳಗಾವಿ, ಬೀದರ್‌, ಗದಗ, ಹಾವೇರಿ, ವಿಜಯಪುರ, ಧಾರವಾಡ, ಬಳ್ಳಾರಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಜೋರು ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲೂ ಮೋಡ ಕವಿದ ವಾತಾವರಣ ಇರಲಿದ್ದು, ರಾತ್ರಿ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಗುರುವಾರ ರಾತ್ರಿ ಹಾಗೂ ಶುಕ್ರವಾರ ಉತ್ತರ ಒಳನಾಡು, ಕರಾವಳಿ, ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗಿದೆ. ಶುಕ್ರವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಲಬುರಗಿ ಜಿಲ್ಲೆಯ ಕಮಲಾಪುರ, ಯಡ್ರಾಮಿ, ಬಾಗಲಕೋಟೆ ಜಿಲ್ಲೆಯ ಬಾದಾಮಿಯಲ್ಲಿ 5 ಸೆಂ.ಮೀ, ಕಲಬುರಗಿಯ ಆಳಂದ, ಚಿಕ್ಕಮಗಳೂರು ಜಿಲ್ಲೆಯ ಕಳಸದಲ್ಲಿ 4 ಸೆಂ.ಮೀ ಮಳೆಯಾಗಿದೆ.

ರಾಯಚೂರಿನ ಗಬ್ಬೂರು, ವಿಜಯಪುರ, ಆಲಮಟ್ಟಿ, ಚಿಕ್ಕಮಗ ಳೂರು, ಬೀದರ್‌ನ ಹುಮನಾ ಬಾದ್‌, ಕಲಬುರಗಿಯ ಖಜೂರಿಯಲ್ಲಿ 2 ಸೆಂ.ಮೀ ಮಳೆಯಾಗಿದೆ. ಧಾರವಾಡದ ಕುಂದಗೊಳ, ಯಾದಗಿರಿಯ ಕೆಂಬಾವಿ, ಚಿಕ್ಕಮಗಳೂರಿನ ಎನ್‌.ಆರ್‌.ಪುರದಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT