ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಏಪ್ರಿಲ್‌ 9ರಿಂದ ಮಲೆನಾಡು, ಕರಾವಳಿ ಪ್ರದೇಶದಲ್ಲಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ

Published 8 ಏಪ್ರಿಲ್ 2024, 14:44 IST
Last Updated 8 ಏಪ್ರಿಲ್ 2024, 14:44 IST
ಅಕ್ಷರ ಗಾತ್ರ

ಬೆಂಗಳೂರು: ಮಲೆನಾಡು, ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಏಪ್ರಿಲ್‌ 9ರಿಂದ 14ರ ನಡುವೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

9ರಂದು ಕೊಡಗು, ಚಿಕ್ಕಮಗಳೂರು, ಮೈಸೂರು ಜಿಲ್ಲೆಗಳಲ್ಲಿ ಹಗುರವಾಗಿ ಮಳೆಯಾಗುವ ಸಾಧ್ಯತೆಯಿದೆ. ಅಂದು ರಾಜ್ಯದ ಉಳಿದೆಡೆ ಒಣಹವೆ ಇರಲಿದೆ ಎಂದು ಸೂಚನೆ ನೀಡಿದೆ.

‘14ರಂದು ಕರಾವಳಿಯ ಎಲ್ಲ ಜಿಲ್ಲೆಗಳು ಹಾಗೂ ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ ಜಿಲ್ಲೆಯ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯಿದೆ’ ಎಂದು ತಿಳಿಸಿದೆ.

ಮಂಗಳವಾರ ಉತ್ತರ ಕನ್ನಡ, ಬಾಗಲಕೋಟೆ, ಕಲಬುರಗಿ, ರಾಯಚೂರು, ಯಾದಗಿರಿ, ಬಳ್ಳಾರಿ ಜಿಲ್ಲೆಗಳಲ್ಲಿ ಬಿಸಿಗಾಳಿ ವಾತಾವರಣ ಇರಲಿದೆ ಎಂದು ಸೂಚಿಸಿದೆ.

ಬೆಂಗಳೂರು ನಗರದಲ್ಲಿ ಸೋಮವಾರ ಗರಿಷ್ಠ ಉಷ್ಣಾಂಶ 37 ಡಿಗ್ರಿ ಸೆಲ್ಸಿಯಸ್‌, ದೇವನಹಳ್ಳಿಯಲ್ಲಿ 37.6, ಎಚ್‌ಎಎಲ್‌ ಸುತ್ತಮುತ್ತ 36.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT