ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರಾಜ್ಯದಲ್ಲಿ ಎರಡು ದಿನ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

Published 11 ಡಿಸೆಂಬರ್ 2023, 14:52 IST
Last Updated 11 ಡಿಸೆಂಬರ್ 2023, 14:52 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ಮಲೆನಾಡು, ದಕ್ಷಿಣ ಒಳನಾಡು ಹಾಗೂ ಕರಾವಳಿ ವ್ಯಾಪ್ತಿಯ ಜಿಲ್ಲೆಗಳಲ್ಲಿ ಮಂಗಳವಾರ ಮತ್ತು ಬುಧವಾರ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ವ್ಯಾಪ್ತಿಯ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ಸುತ್ತಮುತ್ತಲ ಪ್ರದೇಶದಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಕರಾವಳಿ, ಮಲೆನಾಡು ಪ್ರದೇಶದ ಜಿಲ್ಲೆಗಳಲ್ಲಿ ಶನಿವಾರದಿಂದಲೂ ರಾತ್ರಿ ವೇಳೆ ಧಾರಾಕಾರ ಮಳೆಯಾಗಿದ್ದು, ಕೃಷಿಕರು ತೊಂದರೆಗೆ ಒಳಗಾಗಿದ್ದಾರೆ. ಕಾಫಿ ಕೊಯ್ಲು, ಭತ್ತ ಹಾಗೂ ರಾಗಿ ಪೈರಿನ ಕಟಾವಿಗೂ ಸಮಸ್ಯೆಯಾಗಿದೆ. ಕಣದಲ್ಲಿ ಒಣಗಲು ಹಾಕಿದ್ದ ಕಾಫಿ ಮಳೆಯಲ್ಲಿ ತೊಯ್ದು ಹೋಗಿದೆ ಎಂದು ಕೃಷಿಕರು ಅಳಲು ತೋಡಿಕೊಂಡಿದ್ದಾರೆ.

ಸೋಮವಾರ ಬೆಳಿಗ್ಗೆ 8.30ಕ್ಕೆ ಕೊನೆಯಾದಂತೆ ಕಳೆದ 24 ಗಂಟೆ ಅವಧಿಯಲ್ಲಿ, ಧರ್ಮಸ್ಥಳದಲ್ಲಿ 10 ಸೆಂ.ಮೀ, ಬೆಳ್ತಂಗಡಿಯಲ್ಲಿ 4, ಪಣಂಬೂರು, ಚಿಕ್ಕಮಗಳೂರಿನಲ್ಲಿ 3, ಮಂಗಳೂರು, ಉಡುಪಿಯ ಸಿದ್ದಾಪುರದಲ್ಲಿ 2, ಚಾಮರಾಜನಗರದ ಕೆ.ವಿ.ಕೆ ವ್ಯಾಪ್ತಿ ಹಾಗೂ ಕೊಡಗಿನ ಕುಶಾಲನಗರದಲ್ಲಿ 1 ಸೆಂ.ಮೀ ಮಳೆ ಸುರಿದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT