ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಳೆ: ರಾಜ್ಯದ ಈ ಮೂರು ಜಿಲ್ಲೆಗಳಿಗೆ ಬುಧವಾರ ಯೆಲ್ಲೊ ಅಲರ್ಟ್‌

Published 7 ನವೆಂಬರ್ 2023, 15:59 IST
Last Updated 7 ನವೆಂಬರ್ 2023, 15:59 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಬುಧವಾರವು ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಶಿವಮೊಗ್ಗ, ಚಿತ್ರದುರ್ಗ, ತುಮಕೂರು ಜಿಲ್ಲೆಗಳಲ್ಲಿ ಬಿರುಸಿನ ಮಳೆಯಾಗುವ ಸಾಧ್ಯತೆಯಿದ್ದು, ಈ ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್‌’ ಸೂಚನೆ ನೀಡಲಾಗಿದೆ. ಗದಗ, ಹಾವೇರಿ, ಬೆಂಗಳೂರು ನಗರ ಹಾಗೂ ಗ್ರಾಮಾಂತರ, ಮೈಸೂರು, ಮಂಡ್ಯ, ಚಿಕ್ಕಬಳ್ಳಾಪುರ ಜಿಲ್ಲೆಗಳ ಅಲ್ಲಲ್ಲಿ ಮಳೆಯಾಗಬಹುದು ಎಂದು ಇಲಾಖೆಯು ತಿಳಿಸಿದೆ.

ಮಂಗಳವಾರ ಕನಿಷ್ಠ ಉಷ್ಣಾಂಶ ದಾವಣಗೆರೆ ಜಿಲ್ಲೆಯಲ್ಲಿ 19 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT