ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಶಿರಾಲಿಯಲ್ಲಿ ಮಂಗಳವಾರ 34.2 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಬೆಳಗಾವಿ ವಿಮಾನ ನಿಲ್ದಾಣದಲ್ಲಿ 17.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ.
ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಅಕ್ಟೋಬರ್ 2 ಮತ್ತು 3ರಂದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಉತ್ತರ ಒಳನಾಡು, ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.