ಬೆಂಗಳೂರು: ಭಾನುವಾರ ರಾತ್ರಿ ಸುರಿದ ಮಳೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ಪಕ್ಕದಲ್ಲಿರುವ ಕ್ಯಾಂಟೀನ್ಗೂ ನೀರು ನುಗ್ಗಿದೆ. ಕ್ಯಾಂಟೀನ್ನಲ್ಲಿ ಸುಮಾರು ಮೂರು ಅಡಿಗಳಿಗೂ ಹೆಚ್ಚು ನೀರು ನಿಂತಿತ್ತು ಎಂದು ಸಿಬ್ಬಂದಿ ತಿಳಿಸಿದರು.

ಸೋಮವಾರ ಸಿಬ್ಬಂದಿ ನೀರು ತೆಗೆಯಲು ಹರಸಾಹಸ ಮಾಡಿದರು.

ಭಾನುವಾರ ರಾತ್ರಿ ಪೂರ್ತಿ ಸುರಿದಿದ್ದು, ನಗರದಲ್ಲಿ 140 ಮಿ.ಮೀ. ಮಳೆಯಾಗಿದೆ.ಭಾರಿ ಮಳೆಯಿಂದ ರಸ್ತೆಗಳು ಹೊಳೆಯಂತಾಗಿವೆ. ಪೂರ್ವಭಾಗದಲ್ಲಿನ ಬಡಾವಣೆಗಳು ಕೆರೆಗಳಂತಾಗಿದ್ದು, ಕೆರೆಗಳ ಕೋಡಿ ಹರಿದು ಹೋಗಲು ಜಾಗವಿಲ್ಲದ ಕಾರಣ ಮಳೆ ನಿಂತರೂ ಬಡಾವಣೆಗಳಿಗೆ ನೀರು ನುಗ್ಗುವುದು ನಿಂತಿಲ್ಲ. ರಸ್ತೆಗಳಲ್ಲಿ ಕಿಲೋಮೀಟರ್ಗಟ್ಟಲೆ ವಾಹನಗಳ ದಟ್ಟಣೆ ಇತ್ತು.

ಬೆಂಗಳೂರಲ್ಲಿ 51 ವರ್ಷಗಳಲ್ಲೇ ದಾಖಲೆ ಮಳೆ: ಸೆಪ್ಟೆಂಬರ್ನಲ್ಲಿ 709 ಮಿ.ಮೀ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.