ಬೆಂಗಳೂರು: ರೈತರ ಸಮಸ್ಯೆಗಳನ್ನು ನೇರವಾಗಿ ಆಲಿಸಿ ಪರಿಹಾರ ಕಂಡುಕೊಳ್ಳಲು ಮತ್ತು ಪ್ರಗತಿಪರ ರೈತರ ಸಾಧನೆಗಳನ್ನು ಇತರರಿಗೂ ಪ್ರೇರಣೆಯಾಗಿಸುವ ಉದ್ದೇಶದಿಂದ ‘ರೈತ ವಾಸ್ತವ್ಯ’ ಕಾರ್ಯಕ್ರಮ ಹಮ್ಮಿಕೊಳ್ಳಲು ಕೃಷಿ ಸಚಿವ ಬಿ.ಸಿ. ಪಾಟೀಲ ಮುಂದಾಗಿದ್ದಾರೆ.

‘ಇಂಥದ್ದೊಂದು ಕಾರ್ಯಕ್ರಮಕ್ಕೆ ಸಚಿವರು ಈ ಹಿಂದೆಯೇ ಚಿಂತನೆ ನಡೆಸಿದ್ದರು. ಚಾಮರಾಜನಗರ ಜಿಲ್ಲೆಯ ರೈತರೊಬ್ಬರ ಮನೆಯಲ್ಲಿ ವಾಸ್ತವ್ಯ ಹೂಡಿ, ಸಮಸ್ಯೆಗಳಿಗೆ ಧ್ವನಿಯಾಗಲು ನಿರ್ಧರಿಸಿದ್ದರು. ಆದರೆ, ಕೋವಿಡ್‌ನಿಂದಾಗಿ ಯೋಜನೆ ಯನ್ನು ಕಾರ್ಯಗತಗೊಳಿಸಲು ಸಾಧ್ಯವಾಗಿರಲಿಲ್ಲ. ಇದೀಗ ಮತ್ತೆ ಈ ಬಗ್ಗೆ ಚಿಂತನೆ ನಡೆಸಿದ್ದಾರೆ’ ಎಂದು ಸಚಿವರ ಆಪ್ತ ಮೂಲಗಳು ತಿಳಿಸಿವೆ.

ಸಚಿವರು ಇಲಾಖೆಯ ಅಧಿಕಾರಿಗಳೊಂದಿಗೆ ರೈತರ ಮನೆಗಳಿಗೆ ತೆರಳಿ, ಅಲ್ಲೇ ವಾಸ್ತವ್ಯ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ರೈತನ ಕುಟುಂಬ ಮತ್ತು ಸುತ್ತಲಿನ ರೈತರ ಜತೆಗೆ ಕಾಲ ಕಳೆಯುವ ಮೂಲಕ ಕೃಷಿ ವಿಚಾರಗಳ ಬಗ್ಗೆ ಚರ್ಚಿಸುವುದು ಕಾರ್ಯಕ್ರಮದ ಉದ್ದೇಶ.

ಆ ಮೂಲಕ, ಕೃಷಿ ಉತ್ಪನ್ನಗಳ ಇಳುವರಿ ಹೆಚ್ಚಿಸುವುದು, ಉತ್ತಮ ಬೆಲೆ ಸಿಗುವಂತೆ ಮಾಡಲು ಪೂರಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸಲಹೆ ಸೂಚನೆಗಳನ್ನು ಪಡೆಯಲಿದ್ದಾರೆ. ಕೊರೊನಾ ಸೋಂಕು ಕಡಿಮೆಯಾದ ಬಳಿಕ ರೈತ ವಾಸ್ತವ್ಯದ ರೂಪುರೇಷೆ ಮತ್ತು ದಿನಾಂಕವೂ ನಿಗದಿಯಾಗಲಿದೆ ಎಂದೂ ಮೂಲಗಳುಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.