ಸೋಮವಾರ, 3 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತರ ಹೋರಾಟ ಬೆಂಬಲಿಸಿ ರಾಜಭವನ ಚಲೋ: ಸಿದ್ದರಾಮಯ್ಯ

Last Updated 11 ಜನವರಿ 2021, 8:52 IST
ಅಕ್ಷರ ಗಾತ್ರ

ಹುಬ್ಬಳ್ಳಿ: ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟ ಬೆಂಬಲಿಸಿ ಜ. 20 ರಂದು ಕಾಂಗ್ರೆಸ್ ವತಿಯಿಂದ ರಾಜಭವನ ಚಲೋ ನಡೆಸಲಾಗುವುದು ಎಂದು ವಿರೋದ ಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಸಬ್ ಕಾ ಸಾಥ್ ಸಬ್ ಕಾ ವಿಕಾಸ ಅಂತ ಹೇಳಿ ಯಾಮಾರಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಹೇಳುವುದು ಒಂದು ಮಾಡುವುದು ಒಂದು. ಅವರದು ದ್ವಂದ್ವ ನಿಲುವು ಎಂದು ಮೂದಲಿಸಿದರು.

ರಾಜ್ಯ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯಲ್ಲಿ ಈಗಲೂ ಸ್ಪಷ್ಟತೆ ಇಲ್ಲ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಿಹಿ ಸುದ್ದಿ ಕೊಡುತ್ತೇವೆ ಎಂದಿದ್ದಾರೆ. ಈ ಬಗ್ಗೆ ಹೈಕಮಾಂಡ್ ಏನಾದರೂ ಹೇಳಿದೆಯಾ ಎಂದು ಪ್ರಶ್ನಿಸಿದರು.

ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗೆ ಇಳಿಸುತ್ತೇವೆ ಎಂದು ಆರ್‌ಎಸ್‌ಎಸ್‌ನವರೇ ನನಗೆ ಹೇಳಿದ್ದಾರೆ. ಆರ್‌ಎಸ್‌ಎಸ್‌ ಹಾಗೂ ಉಳಿದ ಪಕ್ಷದಲ್ಲೂ ನನಗೆ ಸ್ನೇಹಿತರಿದ್ದಾರೆ ಎಂದರು.

ಬಿಜೆಪಿ ಸರ್ಕಾರ ಶೇ 30 ಪರ್ಸಟ್ ಸರ್ಕಾರ.ಹಣ‌ಕೊಡದೇ ಯಾವುದೇ ಕಡತ ವಿಲೇವಾರಿ ಆಗುವುದಿಲ್ಲ. ಎನ್ ಒಸಿ ಹಾಗೂ ಯೋಜನೆಗಳಿಗೆ ಅನುಮೋದನೆ ಸಿಗುವುದಿಲ್ಲ. ನಮ್ಮ ಸರ್ಕಾರದಲ್ಲಿ ಯಾವುದೇ ಹಗರಣ ಆಗಿದ್ದರೆ‌ ತೋರಿಸಲಿ ಎಂದರು

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT