'ದೇವೇಗೌಡರು ರಾಜ್ಯಸಭೆಗೆ ಸ್ಪರ್ಧಿಸಿದ್ದಾಗ ಕಾಂಗ್ರೆಸ್ ಅವರನ್ನು ಬೆಂಬಲಿಸಿತ್ತು. ನಾವೀಗ ಅಲ್ಪಸಂಖ್ಯಾತ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದು, ಅವರನ್ನು ಗೆಲ್ಲಿಸಲು ಕುಮಾರಸ್ವಾಮಿ ಕೈಜೋಡಿಸಲಿ' ಎಂದು ಸಿದ್ದರಾಮಯ್ಯ ಹೇಳಿದರು.
'ಕೆಡಿಸುವ ಆಟ ಅಡುತ್ತಿರುವುದು ಜೆಡಿಎಸ್. ಕಾಂಗ್ರೆಸ್ ಅಧಿಕ ಸಂಖ್ಯೆಯಲ್ಲಿದ್ದಾಗಲೂ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಿತ್ತು. ಹೀಗಿರುವಾಗ ಕುಮಾರಸ್ವಾಮಿ ಅವರು ಕಾಂಗ್ರೆಸ್ ಕಡೆ ಬೆರಳು ತೋರಿಸುವುದು ಸರಿಯಲ್ಲ' ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.