ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯಸಭಾ ಚುನಾವಣೆ: ಅಡ್ಡಮತ ಚಲಾಯಿಸಿದ ಎಸ್.ಟಿ‌. ಸೋಮಶೇಖರ್

Published 27 ಫೆಬ್ರುವರಿ 2024, 6:07 IST
Last Updated 27 ಫೆಬ್ರುವರಿ 2024, 6:07 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ಚಲಾಯಿಸಿದ್ದಾರೆ.

'ಸೋಮಶೇಖರ್ ಅಡ್ಡ ಮತ ಚಲಾಯಿಸಿದ್ದಾರೆ' ಎಂದು ಬಿಜೆಪಿಯ ಚುನಾವಣಾ ಏಜೆಂಟರೊಬ್ಬರು ಖಚಿತಪಡಿಸಿದರು.

ಆತ್ಮಸಾಕ್ಷಿಯ ಮತ ಹಾಕಿದ್ದೇನೆ: ಎಸ್.ಟಿ. ಸೋಮಶೇಖರ್

'ರಾಜ್ಯಸಭಾ ಚುನಾವಣೆಯಲ್ಲಿ ಆತ್ಮಸಾಕ್ಷಿಯ ಮತ ಹಾಕಿದ್ದೇನೆ' ಎಂದು ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್ ಹೇಳಿದರು.

ವಿಧಾನಸೌಧದಲ್ಲಿ ಮಂಗಳವಾರ ಮತ ಚಲಾಯಿಸಿದ ಬಳಿಕ‌ ಸುದ್ದಿಗಾರರ ಜತೆ ಮಾತನಾಡಿದ ಅವರು, 'ಆತ್ಮಸಾಕ್ಷಿಯಂತೆ ಮತ ಚಲಾಯಿಸಿ, ಮತ ಪತ್ರವನ್ನು ಚುನಾವಣಾ ಏಜೆಂಟ್ ಗೆ ತೋರಿಸಿದ್ದೇನೆ' ಎಂದರು.

ಸೋಮಶೇಖರ್ ಅವರು ಅಡ್ಡ ಮತದಾನದ ಕುರಿತು ಸ್ಪಷ್ಟವಾಗಿ ಏನನ್ನೂ ಹೇಳಲಿಲ್ಲ. ಆದರೆ, ಅವರು ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ಚಲಾಯಿಸಿರುವ ಸಾಧ್ಯತೆ ಇದೆ ಎಂಬ ಚರ್ಚೆ ಶಾಸಕರ ಮಧ್ಯೆ ನಡೆದಿದೆ.

ಮತ ಚಲಾಯಿಸುವ ಮೊದಲು ಮಾತನಾಡಿದ್ದ ಸೋಮಶೇಖರ್, 'ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಮಾಡಲು ಪ್ರಯತ್ನಿಸಿದ್ದೆ‌. ಆದರೆ ಅವರು ಕಾಲಾವಕಾಶ ನೀಡಲಿಲ್ಲ' ಎಂದು ದೂರಿದರು.

'ಅಭಿವೃದ್ಧಿಗೆ ಯಾರು ಅನುದಾನ ಕೊಡುತ್ತಾರೋ ಅವರಿಗೆ ಮತ ಹಾಕುತ್ತೇನೆ' ಎಂದು ಹೇಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT