ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು 2024ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ಸಾಧಕರನ್ನು ನಾಮನಿರ್ದೇಶನ ಮಾಡಲು ಸೆಪ್ಟೆಂಬರ್ 1ರಿಂದ ಸೆ.30ರವರೆಗೆ ಅವಕಾಶ ಕಲ್ಪಿಸಿದೆ.
ಕಲೆ, ಸಾಹಿತ್ಯ, ಜಾನಪದ, ಕೃಷಿ–ಪರಿಸರ, ವಿಜ್ಞಾನ–ತಂತ್ರಜ್ಞಾನ, ಕ್ರೀಡೆ ಸೇರಿ ವಿವಿಧ ಕ್ಷೇತ್ರಗಳ ಸಾಧಕರ ಹೆಸರನ್ನು ಸೇವಾ ಸಿಂಧು ಪೋರ್ಟಲ್ ಮೂಲಕ ನಾಮನಿರ್ದೇಶನ ಮಾಡಬಹುದಾಗಿದೆ ಎಂದು ಇಲಾಖೆ ನಿರ್ದೇಶಕರು ತಿಳಿಸಿದ್ದಾರೆ.
ರಾಜ್ಯೋತ್ಸವ ಪ್ರಶಸ್ತಿಗೆ 60 ವರ್ಷ ಮೇಲ್ಪಟ್ಟವರನ್ನು ಮಾತ್ರ ಶಿಫಾರಸು ಮಾಡಬಹುದಾಗಿದೆ. ಕ್ರೀಡಾ ಕ್ಷೇತ್ರದಲ್ಲಿ ಮಾತ್ರ ವಯಸ್ಸಿನ ವಿನಾಯಿತಿ ನೀಡಲಾಗಿದೆ. ಪ್ರಶಸ್ತಿಯು ತಲಾ ₹5 ಲಕ್ಷ ನಗದು ಹಾಗೂ 25 ಗ್ರಾಂ ಚಿನ್ನದ ಪದಕ ಒಳಗೊಂಡಿರಲಿದೆ.
ಸೇವಾ ಸಿಂಧು ಪೋರ್ಟಲ್ ವಿಳಾಸ: www.sevasindhu.karnataka.gov.in