ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

10 ಸಂಘ-ಸಂಸ್ಥೆಗಳಿಗೂ ಈ ಬಾರಿ ರಾಜ್ಯೋತ್ಸವ ಪ್ರಶಸ್ತಿ

Published 26 ಅಕ್ಟೋಬರ್ 2023, 19:41 IST
Last Updated 26 ಅಕ್ಟೋಬರ್ 2023, 19:41 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣ ಮಾಡಿದ ಸುವರ್ಣ ವರ್ಷದ ನೆನಪಿಗಾಗಿ ಕನ್ನಡ, ಕರ್ನಾಟಕದ ಏಳಿಗೆಗಾಗಿ ಶ್ರಮಿಸಿದ 10 ಸಂಘ-ಸಂಸ್ಥೆಗಳಿಗೆ ಈ ವರ್ಷ ಹೆಚ್ಚುವರಿಯಾಗಿ ಪ್ರಶಸ್ತಿ ನೀಡಲು ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿ ತೀರ್ಮಾನಿಸಿದೆ.

ಗುರುವಾರ ನಡೆದ ಆಯ್ಕೆ ಸಮಿತಿ ಸಭೆಯ ನಂತರ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸುವವರ ಸಂಖ್ಯೆ ಪ್ರತಿ ವರ್ಷ ಹೆಚ್ಚಳವಾಗುವ ಜತೆಗೆ, ಲಾಬಿಗಳಿಂದಾಗಿ ಪ್ರಶಸ್ತಿ ಸಂಖ್ಯೆಯಲ್ಲೂ ಗಣನೀಯವಾಗಿ ಏರಿಕೆಯಾಗುತ್ತಿತ್ತು. ಅದಕ್ಕೆ ಕಡಿವಾಣ ಹಾಕಲು ಏಕೀಕರಣವಾಗಿ ಎಷ್ಟು ವರ್ಷಗಳಾಗುತ್ತದೋ ಅಷ್ಟು ಪ್ರಶಸ್ತಿಗಳನ್ನು ಆಯಾ ವರ್ಷ ನೀಡಲು ಹಿಂದೆ ನಮ್ಮ ಸರ್ಕಾರವೇ ತೀರ್ಮಾನ ಕೈಗೊಂಡಿತ್ತು. ಅದರಂತೆಯೇ ಈ ವರ್ಷ 68 ಪ್ರಶಸ್ತಿ ನೀಡಲಾಗುತ್ತಿದೆ. ಜತೆಗೆ, ಸಂಘ-ಸಂಸ್ಥೆಗಳಿಗೆ ಹೆಚ್ಚುವರಿ 10 ಪ್ರಶಸ್ತಿ ನೀಡಲಾಗುವುದು’ ಎಂದು ಹೇಳಿದರು.

ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್‌ ತಂಗಡಗಿ, ಸಚಿವರಾದ ಜಿ.ಪರಮೇಶ್ವರ, ಎಚ್.ಸಿ.ಮಹದೇವಪ್ಪ, ಆಯ್ಕೆ ಸಮಿತಿ ಸದಸ್ಯರಾದ ಜಾಣಗೆರೆ ವೆಂಕಟರಾಮಯ್ಯ, ಎಚ್‌.ಎಲ್‌.ಪುಷ್ಪಾ, ವೀರಣ್ಣ ದಂಡೆ,  ಮೂಡ್ನಾಕೂಡು ಚಿನ್ನಸ್ವಾಮಿ, ಅಲ್ಲಮಪ್ರಭು ಬೆಟ್ಟದೂರ, ಕಾ.ತ.ಚಿಕ್ಕಣ್ಣ, ಪಿಂಡಿಪಾಪನಹಳ್ಳಿ ವೆಂಕಟಪ್ಪ, ಟಾಕಪ್ಪ ಕಣ್ಣೂರು, ಪಿಚ್ಚಳ್ಳಿ ಶ್ರೀನಿವಾಸ್‌, ವಿಠಲ್‌ ಐ.ಬೆಣಗಿ, ಸಣ್ಣರಾಮ, ವೆಂಕಟರಾಮಯ್ಯ, ಎಂ.ಎಸ್‌.ಮೂರ್ತಿ, ಗೀತಾ ಶಿವಮೊಗ್ಗ,  ಜಯದೇವಿ ಜಂಗಮ ಶೆಟ್ಟಿ, ಐರೋಡಿ ಗೋವಿಂದಪ್ಪ, ಸಾಧುಕೋಕಿಲ, ಸುಕನ್ಯಾ ಪ್ರಭಾಕರ್‌, ಫ‌ಯಾಜ್‌ ಖಾನ್‌, ಹೃಷಿಕೇಶ್‌ ಬಹದ್ದೂರ್‌ ದೇಸಾಯಿ, ನರಸಿಂಹಲು ವಡವಾಟಿ, ಡಿ.ಎನ್‌.ನರಸಿಂಹರಾಜು, ಪುರುಷೋತ್ತಮ ಬಿಳಿಮಲೆ, ಚನ್ನಬಸವಣ್ಣ, ಶೈಲೇಶ್‌ಚಂದ್ರ ಗುಪ್ತ, ಜೆ.ಲೋಕೇಶ್‌ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT