ಬೆಂಗಳೂರು: ಹೆಸರಾಂತ ವೈದ್ಯ ಡಾ.ಎಂ.ಕೆ. ಸುದರ್ಶನ್ ಅವರನ್ನು ರಾಜ್ಯ ಸರ್ಕಾರವು ಈ ಸಾಲಿನಲ್ಲಿವೈದ್ಯಕೀಯ ಕ್ಷೇತ್ರದ ಗಣ್ಯರಿಗೆ ನೀಡುವ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಿದೆ.

ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ಪ್ರಾಧ್ಯಾಪಕರಾಗಿ, ಡೀನ್ ಆಗಿ ಹಾಗೂ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿರುವ ಡಾ.ಎಂ.ಕೆ. ಸುದರ್ಶನ್ ಅವರು ವೈದ್ಯಕೀಯ ಶಿಕ್ಷಣದಲ್ಲಿ ಮತ್ತು ವೈದ್ಯಕೀಯ ಕ್ಷೇತ್ರದಲ್ಲಿ ಹೊಸ ಬದಲಾವಣೆ ತರಲು ಶ್ರಮಿಸಿದವರು. ವೃತ್ತಿ ಬದುಕಿನಲ್ಲಿ ಹತ್ತು ಹಲವು ಹುದ್ದೆಗಳನ್ನು ಅಲಂಕರಿಸಿರುವ ಇವರು ವೈದ್ಯಕೀಯ ಕ್ಷೇತ್ರಕ್ಕೆ ತಮ್ಮದೇ ಆದ ರೀತಿಯಲ್ಲಿ ಕೊಡುಗೆ ನೀಡುತ್ತಿದ್ದಾರೆ.

ರಾಜ್ಯ ಸರ್ಕಾರ ರಚಿಸಿದ್ದ ರಾಜ್ಯ ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ ಅಧ್ಯಕ್ಷರಾಗಿ ಕೋವಿಡ್ ನಿಯಂತ್ರಣ ಕಾರ್ಯದಲ್ಲಿ ಮಹತ್ತರ ಪಾತ್ರ ನಿರ್ವಹಿಸಿದ್ದಾರೆ. ಪ್ರಸ್ತುತ ಕಿಮ್ಸ್ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.