ಉಡುಪಿ:‘₹ 300 ಕೋಟಿ ವೆಚ್ಚದಲ್ಲಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಹಾಗೂ ₹ 1,000 ಕೋಟಿ ವೆಚ್ಚದಲ್ಲಿ 70 ಎಕರೆಯಲ್ಲಿ ಅಭಿವೃದ್ಧಿ ಕಾಮಗಾರಿ ಮಾಡುವ ಬಗ್ಗೆ ಅಯೋಧ್ಯೆ ರಾಮಜನ್ಮಭೂಮಿ ಟ್ರಸ್ಟ್ನ ಸಭೆಯಲ್ಲಿ ಚರ್ಚೆ ನಡೆಯಿತು’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ತಿಳಿಸಿದರು.

ಶನಿವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಸಭೆಯಲ್ಲಿ ಭಾಗವಹಿಸಿದ ಬಳಿಕ ಮಾತನಾಡಿದ ಶ್ರೀಗಳು, ಮಂದಿರ ನಿರ್ಮಾಣಕ್ಕೆ ಬೇಕಾಗುವ ಹಣವನ್ನು ಕಂಪೆನಿಗಳ ಸಿಎಸ್ಆರ್ ನಿಧಿಯಿಂದ ಪಡೆದುಕೊಳ್ಳುವುದು ಹಾಗೂ ಒಬ್ಬ ವ್ಯಕ್ತಿಯಿಂದ ಕನಿಷ್ಠ ₹ 10, ಮನೆಯಿಂದ ₹ 100 ಸಂಗ್ರಹಿಸುವ ಬಗ್ಗೆ ಚರ್ಚೆ ನಡೆದಿದೆ. ಈ ಬಗ್ಗೆ ನ.25 ರಿಂದ ಡಿ. 25ರವರೆಗೆ ವ್ಯಾಪಕ ಆಂದೋಲನ ನಡೆಸಲು ತೀರ್ಮಾನಿಸಲಾಗಿದೆ ಎಂದರು.

ಇದನ್ನೂ ಓದಿ:ಅಯೋಧ್ಯೆಯಲ್ಲಿ ರಾಮ ಮಂದಿರದ ನಿರ್ಮಾಣ ಕಾರ್ಯಕ್ಕೆ ಶಿಲಾನ್ಯಾಸ ಶೀಘ್ರ

ರಾಮಮಂದಿರ ನಿರ್ಮಾಣ ಸಂಬಂಧ ಭೂಮಿಯ ಧಾರಣಾ ಸಾಮರ್ಥ್ಯ ಪರೀಕ್ಷಾ ಪ್ರಕ್ರಿಯೆ ಆರಂಭವಾಗಿದ್ದು, ಎಲ್ ಅಂಡ್ ಟಿ ಕಂಪೆನಿ ಮಂದಿರ ನಿರ್ಮಾಣ ಕಾರ್ಯ ಕೈಗೆತ್ತಿಕೊಳ್ಳಲಿದೆ.15 ದಿನದ ಮೊದಲು ಭೂಮಿ ಪೂಜೆಯ ದಿನವನ್ನು ಸಾರ್ವಜನಿಕವಾಗಿ ಘೋಷಿಸಲಾಗುವುದು. ಮಂದಿರ ನಿರ್ಮಾಣವಾಗುತ್ತಿರುವ 200 ಅಡಿಯ ಆಳದಲ್ಲಿ ತಾಮ್ರಪತ್ರ ಇರಿಸುವ ಬಗ್ಗೆಯೂ ಚರ್ಚೆ ನಡೆಯಿತು ಎಂದು ಪೇಜಾವರ ಮಠದ ವಿಶ್ವಪ್ರಸನ್ನ ಸ್ವಾಮೀಜಿ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.