ಬೆಂಗಳೂರು: ರಾಜೀವ್ ಗಾಂಧಿಯವರು ಮೊದಲ ಹೆಜ್ಜೆ ಇಡದೇ ಹೋಗಿದ್ದರೆ, ಬಿಜೆಪಿಯವರಿಗೆ ರಾಮ ಮಂದಿರದ ಆಲೋಚನೆಯೇ ಬರುತ್ತಿರಲಿಲ್ಲ ಎಂದು ರಾಜ್ಯ ಕಾಂಗ್ರೆಸ್ ಘಟಕ ಹೇಳಿದೆ.

ಈ ಬಗ್ಗೆ ಸಾಮಾಜಿಕ ಜಾಲ ತಾಣಗಳಲ್ಲಿ ಬರೆದುಕೊಂಡಿರುವ ಕಾಂಗ್ರೆಸ್, ಭಾರತದ ಹಳ್ಳಿ, ಹಳ್ಳಿಗಳಲ್ಲಿ ಲಕ್ಷಾಂತರ ರಾಮ ದೇವಾಲಯಗಳು ನಿರ್ಮಾಣವಾಗಿದ್ದು ಕಾಂಗ್ರೆಸ್ ಆಡಳಿತದಲ್ಲಿ. 1989ರಲ್ಲಿ ರಾಮ ಮಂದಿರ ಶಿಲಾನ್ಯಾಸಕ್ಕೆ ವಿಶ್ವ ಹಿಂದೂ ಪರಿಷತ್ಗೆ ಅವಕಾಶ ಕಲ್ಪಿಸಿದವರು ರಾಜೀವ್ ಗಾಂಧಿ ಎಂದು ಹೇಳಿದೆ.
.ರಾಮ ಮಂದಿರ ಉದ್ಘಾಟನೆ | ದೆಹಲಿಯ 14,000 ದೇವಾಲಯಗಳಲ್ಲಿ ನೇರಪ್ರಸಾರ: ಕರ್ನೈಲ್.
ರಾಮರಾಜ್ಯದ ಕನಸು ಕಂಡ ಮಹಾತ್ಮಾ ಗಾಂಧಿ ಕಾಂಗ್ರೆಸ್ ಅಧಿನಾಯಕರಾಗಿದ್ದರು. ನಾಥುರಾಮ್ ಗೂಡ್ಸೆ ಹಾರಿಸಿದ ಗುಂಡಿಗೆ ಎದೆ ಸೀಳಿ ಹುತಾತ್ಮರಾದಾಗ ಮಹಾತ್ಮ ಗಾಂಧೀಜಿ ಅವರು ಹೇಳಿದ ಕೊನೇ ಮಾತು ಹೇ ರಾಮ್! ಆಗ ಬಿಜೆಪಿ ಹುಟ್ಟೇ ಇರಲಿಲ್ಲ ಎಂದು ಕಾಂಗ್ರೆಸ್ ಬರೆದುಕೊಂಡಿದೆ.
. ರಾಮ ಮಂದಿರ ಉದ್ಘಾಟನೆ ದೇಶದ ಪಾಲಿಗೆ ಸುದಿನ: ಶಿವಕುಮಾರ್ .
1985-86 ರಲ್ಲಿ ಅಯೋಧ್ಯೆಯಲ್ಲಿ ಮೊದಲ ಬಾರಿಗೆ ಬೀಗ ತೆಗೆಸಿ ರಾಮನ ಪೂಜೆಗೆ ಅವಕಾಶ ಕಲ್ಪಿಸಿಕೊಟ್ಟಿದ್ದೇ ರಾಜೀವ್ ಗಾಂಧಿ. ರಾಜೀವ್ ಗಾಂಧಿ ಅವರು ಮೊದಲ ಹೆಜ್ಜೆ ಇಡದೇ ಹೋಗಿದ್ದರೆ ಬಿಜೆಪಿಯವರಿಗೆ ಇದರ ಆಲೋಚನೆಯೇ ಬರುತ್ತಿರಲಿಲ್ಲ. ದೂರದರ್ಶನದಲ್ಲಿ ರಾಮಾಯಣದ ಧಾರಾವಾಹಿ ಪ್ರಸಾರ ಮಾಡಿ ಮನೆ, ಮನೆಯೂ ರಾಮಲಲ್ಲಾನನ್ನು ಕಣ್ತುಂಬಿಕೊಳ್ಳುವಂತೆ ಮಾಡಿದ್ದು ಕಾಂಗ್ರೆಸ್ ಸರ್ಕಾರ ಎಂದು ಕಾಂಗ್ರೆಸ್ ಹೇಳಿದೆ.

ರಾಮ ಮತ್ತು ಆತನ ಆದರ್ಶಗಳನ್ನು ಕಾಂಗ್ರೆಸ್ ಮೊದಲಿಂದಲೂ ಪಾಲಿಸುತ್ತಾ ಬಂದಿದೆ. ಆದರೆ ರಾಮನ ಹೆಸರೇಳಿಕೊಂಡೇ ರಾಜಕೀಯ ಆಶ್ರಯ ಹುಡುಕುವ ಬಿಜೆಪಿಗೆ ‘ಸನ್ಮತಿ ದೇ ಭಗವಾನ್’ ಎಂದು ಹೇಳಬೇಕಾಗಿ ಬಂದಿರೋದು ದುರಂತ ಎಂದು ಕಾಂಗ್ರೆಸ್ ಟೀಕಿಸಿದೆ.
.ರಾಮ ಪ್ರಾಣ ಪ್ರತಿಷ್ಠಾಪನೆಗೆ ಹೋಗುವೆ: ಹಿಮಾಚಲ ಕಾಂಗ್ರೆಸ್ ಸಚಿವ ವಿಕ್ರಮಾದಿತ್ಯ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.