ಬೆಂಗಳೂರು: ‘ಬಿಜೆಪಿ ಅಧಿಕಾರದ ಅವಧಿಯಲ್ಲಿ ನಡೆದಿರುವ ಮುಡಾ ನಿವೇಶನ ಹಂಚಿಕೆ ಅಕ್ರಮದಲ್ಲಿ ಸಿದ್ದರಾಮಯ್ಯ ಅವರನ್ನು ಹೊಣೆಯಾಗಿಸಲು ಬಿಜೆಪಿ–ಜೆಡಿಎಸ್ ಷಡ್ಯಂತ್ರ ರೂಪಿಸಿವೆ’ ಎಂದು ರಾಮಮನೋಹರ್ ಲೋಹಿಯಾ ವಿಚಾರ ವೇದಿಕೆಯ ಅಧ್ಯಕ್ಷ ಬಿ.ಎಸ್.ಶಿವಣ್ಣ ಆರೋಪಿಸಿದ್ದಾರೆ.

‘ಹಿಂದುಳಿದ ವರ್ಗಗಳ ನಾಯಕನೊಬ್ಬ 15 ಬಜೆಟ್‌ಗಳನ್ನು ಮಂಡಿಸಿರುವುದನ್ನು ಮತ್ತು ಎರಡನೇ ಬಾರಿಗೆ ಮುಖ್ಯಮಂತ್ರಿ ಆಗಿರುವುದನ್ನು ಬಿಜೆಪಿ–ಜೆಡಿಎಸ್‌ಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಹೀಗಾಗಿಯೇ ಅವರ ವಿರುದ್ಧ ಪಿತೂರಿ ನಡೆಸಲಾಗುತ್ತಿದೆ’ ಎಂದಿದ್ದಾರೆ.

‘ಸಿದ್ದರಾಮಯ್ಯ ಅಧಿಕಾರದಲ್ಲಿ ಇದ್ದಾಗ ಕುಟುಂಬದವರ ಹಸ್ತಕ್ಷೇಪಕ್ಕೆ ಅವಕಾಶ ನೀಡಿಲ್ಲ. ಅವರ ಪತ್ನಿಯನ್ನು ಯಾರೂ ನೋಡಿಲ್ಲ. ಅಷ್ಟರ ಮಟ್ಟಿಗೆ ರಾಜಕೀಯದೊಂದಿಗೆ ಅವರು ಅಂತರ ಕಾಯ್ದುಕೊಂಡಿದ್ದಾರೆ. ಅಂತಹ ಮಹಿಳೆಯನ್ನು ರಾಜಕೀಯಕ್ಕೆ ಎಳೆದು ತರುತ್ತಿರುವುದು ಸರಿಯಲ್ಲ’ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.