ರಾಮದುರ್ಗ: ‘ದೇಶಕ್ಕಾಗಿ ಹೋರಾಡಿದ ಮಹಾನ್ ಪುರುಷರನ್ನು ಕೇವಲ ಒಂದೇ ಜಾತಿಗೆ ಸೀಮಿತಗೊಳಿಸುವುದು ಸೂಕ್ತವಲ್ಲ. ಇಂತಹ ಪರಿಸ್ಥಿತಿ ಮುಂದೆ ಬಾರದಂತೆ ಎಲ್ಲರೂ ಜಾಗೃತಿ ವಹಿಸಬೇಕು. ಈ ನಾಡಿನ ಅಮೂಲ್ಯ ವ್ಯಕ್ತಿಗಳ ಬಗ್ಗೆ ಗೌರವ, ಅಭಿಮಾನ ಹೊಂದಬೇಕು’ ಎಂದು ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು.

ತಾಲ್ಲೂಕಿನ ಚಿಪ್ಪಲಕಟ್ಟಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ರಾಜ ವೀರ ಮದಕರಿ ನಾಯಕ ಮೂರ್ತಿಯನ್ನು ಭಾನುವಾರ ಅನಾವರಣಗೊಳಿಸಿ ಮಾತನಾಡಿದರು.

‘ಈ ನಾಡಿನ ಅಭ್ಯುದಯಕ್ಕೆ ದೇಶದ ಸ್ವಾತಂತ್ರ್ಯ ಸಂಗ್ರಾಮಕ್ಕೆ ಅನೇಕರು ತ್ಯಾಗ, ಬಲಿದಾನ ಮಾಡಿದ್ದಾರೆ. ಮದಕರಿ ನಾಯಕ, ಬಸವಣ್ಣನವರು, ಸಂಗೊಳ್ಳಿ ರಾಯಣ್ಣ, ರಾಣಿ ಚೆನ್ನಮ್ಮ, ಭಗೀರಥರು, ಬಾಬಾಸಾಹೇಬ್ ಅಂಬೇಡ್ಕರ್, ಶಿವಾಜಿ ಮಹಾರಾಜ ಅವರಂತಹ ಮಹಾನ್ ಪುರುಷರನ್ನು ಕೇವಲ ಒಂದೇ ಜಾತಿಗೆ ಸೇರಿಸಬಾರದು. ಅವರೆಲ್ಲರೂ ಮನುಕುಲದ ಆಸ್ತಿಯಾಗಿದ್ದಾರೆ. ಎಲ್ಲರನ್ನೂ ಗೌರವಿಸೋಣ. ಹೆಮ್ಮೆ ಪಡೋಣ. ನಮ್ಮ ಜಾತಿಯನ್ನು ಪ್ರೀತಿಸು ವುದರ ಜತೆಗೆ ಅನ್ಯ ಜಾತಿ- ಧರ್ಮಗಳ ಬಗ್ಗೆ ಗೌರವ ಹೊಂದೋಣ’ ಎಂದರು.

‘ರಾಮದುರ್ಗ ತಾಲ್ಲೂಕಿನ ಅಭಿವೃದ್ಧಿಗೆ ನಾವು ಬದ್ಧರಿದ್ದೇವೆ. ಈ ದಿಸೆಯಲ್ಲಿ ನಮ್ಮ ತಂಡ ಕಾರ್ಯ ಮಾಡುತ್ತಿದೆ. ಈಗಾಗಲೇ ಧನಲಕ್ಷ್ಮಿ ಸಕ್ಕರೆ ಕಾರ್ಖಾನೆ, ಟಿಎಪಿಸಿಎಂಎಸ್, ಪಿಕಾರ್ಡ್ ಚುನಾವಣೆಗಳನ್ನು ಎದುರಿಸಿ ನಮ್ಮ ಅಭ್ಯರ್ಥಿಗಳು ಜಯ ಗಳಿಸಿದ್ದಾರೆ. ನೀರಾವರಿ, ಶಿಕ್ಷಣ, ರಸ್ತೆಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳುತ್ತೇವೆ. ಈ ತಾಲ್ಲೂಕಿನ ಪ್ರಗತಿಗಾಗಿ ಶಕ್ತಿಮೀರಿ ದುಡಿಯಲು ಎಲ್ಲರೂ ಉತ್ಸುಕರಾಗಿದ್ದೇವೆ. ಅಭಿವೃದ್ಧಿ ಕಾರ್ಯಗಳಲ್ಲಿ ಎಂದಿಗೂ ಪಕ್ಷಪಾತ, ಜಾತಿಬೇಧ ಮಾಡುವುದಿಲ್ಲ’ ಎಂದು ಸ್ಪಷ್ಟಪಡಿಸಿದರು.

‘ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಜನ ಬೇಸತ್ತಿದ್ದು, ಮುಂದಿನ 2028ರಲ್ಲಿ ನಡೆಯುವ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ರಾಜ್ಯದಲ್ಲಿ ಸರ್ಕಾರ ರಚನೆಯಾಗಲಿದೆ’ ಎಂದು ವಿಶ್ವಾಸ ವ್ಯಕ್ತ ಪಡಿಸಿದರು. ಸ್ಥಳೀಯ ಕಲ್ಮೇಶ್ವರ ಸ್ವಾಮೀಜಿ, ಭಾಗೋಜಿಕೊಪ್ಪದ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ, ತೊಂಡಿಕಟ್ಟಿಯ ವೆಂಕಟೇಶ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-21-1643359050

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.