ಪಕ್ಕದಲ್ಲೇ ಕಾವೇರಿ ನದಿ ಇದೆ, ಇಗ್ಗಲೂರಿನಲ್ಲಿ 'ದೇವೇಗೌಡ ಬ್ಯಾರೇಜ್' ಇದೆ. ಮಾಗಡಿಗೆ ಹೇಮೆ ಹರಿಯಲಿದ್ದಾಳೆ, ಚಿನ್ನದಂಥ ಭೂಮಿ ಇದೆ, ಮುಗ್ಧ ಜನರಿದ್ದಾರೆ ಬೆಂಗಳೂರಿಗೆ ಪಕ್ಕದಲ್ಲೇ ಇರುವ ಈ ಸಂಪದ್ಭರಿತ ಭೂಮಿಯನ್ನು ಕಿತ್ತುಕೊಂಡು ಬಂಡವಾಳಶಾಹಿಗಳಿಗೆ ಹಂಚಲು ಹೆಸರೊಂದು ಅಡ್ಡಿ ಇದೆ.ನನ್ನ ಮೇಲಿನ ರಾಜಕೀಯ ವೈಷಮ್ಯವೂ ಇದೆ.#SaveRamanagara
— H D Kumaraswamy (@hd_kumaraswamy) January 5, 2020
1/10
ಕೆಂಪೇಗೌಡರು ಬೆಂಗಳೂರು ಕಟ್ಟಿದಾಗ ಊರು ಇನ್ನೂ ಮುಂದೆ ಹೋಗಬಾರದು ಎಂದು ನಾಲ್ಕು ದಿಕ್ಕುಗಳಿಗೆ ಗಡಿ ಗೋಪುರ ಕಟ್ಟಿದ್ದರು. ಆದರೆ ನಾವು ಅದನ್ನೆಲ್ಲ ಎಂದೋ ದಾಟಿದೆವು. ಕೆಂಪೇಗೌಡರ ಇಚ್ಛೆ ಮೀರಿದೆವು. ಕೆರೆ ಕಾಲುವೆ ಮುಚ್ಚಿದೆವು ಪರಿಣಾಮ ಬೆಂಗಳೂರು ಇಂದು ಸಮಸ್ಯೆಗಳ ಕೂಪ.#SaveRamanagara
— H D Kumaraswamy (@hd_kumaraswamy) January 5, 2020
3/10
ಅಷ್ಟಕ್ಕೂ ಹೆಸರಲ್ಲಿ ಏನಿದೆ. ಬೆಂಗಳೂರು ಎಂದ ಮಾತ್ರಕ್ಕೆ ಅಭಿವೃದ್ಧಿ ಸಾಧ್ಯವೇ? ಹಾಗಿದ್ದರೆ ರಾಜ್ಯದ ಬೇರೆ ಜಿಲ್ಲೆಗಳಿಗೆ ಇದೇ ಹೆಸರಿಡಬಹುದಲ್ಲವೇ? ಅದು ನಿಮಗೆ ಸಾಧ್ಯವೇ? ರಾಮನಗರದ ಹೆಸರು ಬದಲಾಯಿಸಲು ಬರುವ ಬಿಎಸ್ವೈ ಅವರು ಶಿವಮೊಗ್ಗಕ್ಕೆ ಬೆಂಗಳೂರು ಎಂದು ಹೆಸರಿಡಬಲ್ಲರೇ? ದಕ್ಷಿಣ ಕನ್ನಡಕ್ಕೆ?#SaveRamanagara
— H D Kumaraswamy (@hd_kumaraswamy) January 5, 2020
5/10
ರಾಮನಗರ ಜಿಲ್ಲೆಯ ಸುತ್ತ ಸಪ್ತ ಬೆಟ್ಟಗಳಿವೆ. ಏಳು ಬೆಟ್ಟಗಳ ನಡುವೆ ಇರುವುದೇ ರಾಮದೇವರ ಬೆಟ್ಟ. ಅದಕ್ಕಾಗಿಯೇ ರಾಮನಗರ ತಾಲೂಕು ಆಗಿದೆ. ರಾಮನ ಹೆಸರನ್ನೇ ಜಿಲ್ಲೆಗೂ ಇಟ್ಟಿದ್ದೇನೆ. ಇದನ್ನು ಮೀರಿ ಹೆಸರು ಬದಲಿಸಿದರೆ ಅದು ಬಿಜೆಪಿಯೇ ಪ್ರತಿಪಾದಿಸುವ ಸಿದ್ಧಾಂತಗಳಿಗೆ ಮಾಡಿದ ಅಪಚಾರ. ರಾಮನ ಹೆಸರಿಗೆ ಆಗುವ ಅಪಮಾನ.#SaveRamanagara
— H D Kumaraswamy (@hd_kumaraswamy) January 5, 2020
9/10
ಹೆಸರು ಬದಲಿಸುವ ನಿರ್ಧಾರದಿಂದ ಸರ್ಕಾರ ಕೂಡಲೇ ಹಿಂದೆ ಸರಿಯಬೇಕು. ಇಲ್ಲದಿದ್ದರೆ ಹೋರಾಟ ಅನಿವಾರ್ಯ.#SaveRamanagara
— H D Kumaraswamy (@hd_kumaraswamy) January 5, 2020
10/10
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.