ರಾಮನಗರ: ಕೇಂದ್ರ ಸರ್ಕಾರ ತನ್ನ ಉದ್ಯೋಗಿಗಳಿಗೆ ನೀಡುತ್ತಿರುವ 8ನೇ ವೇತನ ಆಯೋಗದಲ್ಲಿ ಪಿಂಚಣಿದಾರರು ಮತ್ತು ಕುಟುಂಬದ ಪಿಂಚಣಿದಾರರನ್ನು ಕಡೆಗಣಿಸಿ, ಇನ್ಮುಂದೆ ಪಿಂಚಣಿದಾರರ ವೇತನ ಮತ್ತು ಭತ್ಯೆಗಳನ್ನು ಪರಿಷ್ಕರಿಸಲು ನಿರಾಕರಿಸಿ, ವರ್ಷದಲ್ಲಿ ನೀಡುತ್ತಿದ್ದ 2 ತುಟ್ಟಿಭತ್ಯೆಗಳನ್ನು ನೀಡದಿರಲು ತೀರ್ಮಾನಿಸಿರು ವುದನ್ನು ಬೆಂಗಳೂರು ದಕ್ಷಿಣ ಜಿಲ್ಲಾ ಸರ್ಕಾರಿ ನಿವೃತ್ತ ನೌಕರರ ಸಂಘ ಖಂಡಿಸಿದೆ.

ಸರ್ಕಾರದ ನಿರ್ಧಾರದ ವಿರುದ್ಧ ನಗರದ ಕೋರ್ಟ್ ರಸ್ತೆಯಲ್ಲಿರುವ ಸಂಘದ ಕಚೇರಿ ಆವರಣದಲ್ಲಿ ತೋಳಿಗೆ ಕಪ್ಪುಪಟ್ಟಿ ಧರಿಸಿ ಜಮಾಯಿಸಿದ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಂತರ, ಜಿಲ್ಲಾಧಿಕಾರಿ ಕಚೇರಿಗೆ ಬಂದ ಪ್ರತಿಭಟನಾಕಾರರು, ಸರ್ಕಾರ ತನ್ನ ನಿರ್ಧಾರ ಹಿಂಪಡೆಯಬೇಕು ಎಂದು ಆಗ್ರಹಿಸಿ, ಅಧಿಕಾರಿ ಮೂಲಕ ಪ್ರಧಾನಿಗೆ ಮನವಿ ಸಲ್ಲಿಸಿದರು. ಸಂಘದ ಅಧ್ಯಕ್ಷ ಟಿ. ವೆಂಕಟಾಚಲಯ್ಯ ಮಾತನಾಡಿ, ‘2025ರ ಕಾಯ್ದೆ ಅನುಷ್ಠಾನವಾದರೆ ನಿವೃತ್ತ ನೌಕರರಿಗೆ ಆರ್ಥಿಕ ಅಭದ್ರತೆ ಕಾಡುತ್ತದೆ. ಇದರಿಂದ ಅವರ ಬದುಕು ದುಸ್ತರವಾಗುತ್ತದೆ ಎಂದರು,

ಸಂಘದ ಉಪಾಧ್ಯಕ್ಷ ಆರ್. ಚಿಕ್ಕಬೈರೇಗೌಡ ಮತ್ತು ಪ್ರಧಾನ ಕಾರ್ಯದರ್ಶಿ ಮಲ್ಲರಾಜೇ ಅರಸ್ ಮಾತನಾಡಿ, ‘ಕಾಯ್ದೆಯು ನಾಗರಿಕರಿಗೆ ನ್ಯಾಯ ಮತ್ತು ಸಾಮಾಜಿಕ ಭದ್ರತೆಯನ್ನು ಒದಗಿಸಲು ಶ್ರಮಿಸುವ ಸರ್ಕಾರದ ಘೋಷಿತ ಉದ್ದೇಶಗಳಿಗೆ ವಿರುದ್ಧವಾಗಿದೆ ಎಂದರು.

ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260327-14-872549656

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.