ಕೆ.ಆರ್.ನಗರ (ಮೈಸೂರು ಜಿಲ್ಲೆ): ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಲ್ಲಿನ ತಾಲ್ಲೂಕು ಕ್ರೀಡಾಂಗಣದ ಹೆಲಿಪ್ಯಾಡ್ನಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡುವ ಮೂಲಕ ಜಿಲ್ಲೆಯ ಇತಿಹಾಸವನ್ನು ತಿರುಚಲಾಗುತ್ತಿದೆ ಎಂಬ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಟೀಕೆ ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಅಲ್ಲಿನ ಜನರ ಜನಾಭಿಪ್ರಾಯವನ್ನು ಪಡೆದೇ ಈ ನಿರ್ಣಯವನ್ನು ಕೈಗೊಳ್ಳಲಾಗಿದೆ. ಕುಮಾರಸ್ವಾಮಿಯವರು ರಾಮನಗರ ಜಿಲ್ಲೆ ಸೃಜಿಸುವಾಗ, ಅಲ್ಲಿನ ಇತಿಹಾಸದ ಬಗ್ಗೆ ಯೋಚಿಸಿರಲಿಲ್ಲವೇ? ಆಗ ಏನು ಇತಿಹಾಸ ಇತ್ತು? ಎಂದು ಕೇಳಿದರು.

ಇ.ಡಿ ಹಾಗೂ ಐ.ಟಿ ದಾಳಿಗಳು ರಾಜಕೀಯ ಪ್ರೇರಿತವಾಗಬಾರದು:

ಜಾರಿನಿರ್ದೇಶನಾಲಯ ತನ್ನ ಎಲ್ಲೆಯನ್ನು ಮೀರುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗಮನಿಸಿರುವ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಇ.ಡಿ ಯವರು, ಐ.ಟಿ.ಯವರು ತನಿಖೆ ಮಾಡುವುದನ್ನೇ ಆಗಲಿ ಅಥವಾ ಕಪ್ಪು ಹಣ ವ್ಯವಹಾರವನ್ನು ಪತ್ತೆ ಹಚ್ಚುವುದನ್ನೇ ಆಗಲಿ ಆಕ್ಷೇಪಿಸುವುದಿಲ್ಲ. ಆದರೆ ಇ.ಡಿ ಮತ್ತು ಐ.ಟಿ ದಾಳಿಗಳು ರಾಜಕೀಯ ದುರುದ್ದೇಶದಿಂದ ನಡೆಯಕೂಡದು. ಪ್ರಸ್ತುತ ಗೃಹ ಸಚಿವ ಜಿ.ಪರಮೇಶ್ವರ ಅವರ ಶಿಕ್ಷಣ ಸಂಸ್ಥೆಯ ಮೇಲೆ ಇ.ಡಿ.ದಾಳಿ ನಡೆದಿರುವುದು ರಾಜಕೀಯ ಪ್ರೇರಿತವಾಗಿದೆ. ಸುಪ್ರೀಂ ಕೋರ್ಟ್ ನವರು ಯಾವ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ರೀತಿ ಅವಲೋಕಿಸಿದ್ದಾರೆ ಎಂದು ತೀರ್ಪು ಪರಿಶೀಲಿಸಿದ ನಂತರವಷ್ಟೇ ತಿಳಿಯಲಿದೆ ಎಂದರು.

ಒಂದು ವರ್ಷದಿಂದ ಅಪರಾಧ ಪ್ರಕರಣಗಳು ಕಡಿಮೆ ಇದೆ:

ಅಪರಾಧ ಪ್ರಕರಣಗಳ ವಿರುದ್ಧ ಕಠಿಣ ಕ್ರಮವಾಗುತ್ತದೆ. ಆದರೆ ಕಳೆದ ಒಂದು ವರ್ಷದಿಂದ ರಾಜ್ಯದಲ್ಲಿ ಅಪರಾಧಗಳ ಸಂಖ್ಯೆ ಕಡಿಮೆಯಾಗಿದ್ದು, ಬಿಜೆಪಿ ಅವಧಿಗೆ ಹೋಲಿಸಿದರೆ ನಮ್ಮ ಸರ್ಕಾರದ ಅವಧಿಯಲ್ಲಿ ಅಪರಾಧಗಳ ಸಂಖ್ಯೆ ಕಡಿಮೆ ಇದೆ. ಅಪರಾಧಗಳನ್ನು ಗಮನಾರ್ಹವಾಗಿ ಕಡಿಮೆ ಮಾಡಲು ಸರ್ಕಾರ ಖಂಡಿತ ಪ್ರಯತ್ನಿಸುತ್ತದೆ ಎಂದರು.

ಕೇಂದ್ರ ಸರ್ಕಾರ ಕೋವಿಡ್ ಎಚ್ಚರಿಕಾ ಕ್ರಮ ತೆಗೆದುಕೊಳ್ಳಲಿ:

ಸಿಂಗಾಪುರ , ಹಾಂಕಾಂಗ್ ದೇಶದಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿದ್ದು, ವಿದೇಶದಿಂದ ಆಗಮಿಸುವವರ ಕೋವಿಡ್ ಪರೀಕ್ಷೆ ನಡೆಸಲು ಕೇಂದ್ರ ಸರ್ಕಾರ ಯಾವುದೇ ಕ್ರಮ ವಹಿಸದೇ, ಇಲ್ಲಿಯೂ ಕೋವಿಡ್ ಪ್ರಕರಣಗಳು ಹೆಚ್ಚುವ ಸಾಧ್ಯತೆ ಇರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಕೋವಿಡ್ ಪ್ರಕರಣಗಳಲ್ಲಿ ಏರಿಕೆ ಕಂಡುಬರುತ್ತಿದ್ದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಈ ಬಗ್ಗೆ ಎಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲು ತ್ವರಿತ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು ಎಂದರು.

ಯಂಗ್ ಇಂಡಿಯಾ ಸಂಸ್ಥೆಗೆ ದೇಣಿಗೆ ನೀಡಿರುವ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಸಂಸದ ಡಿ.ಕೆ.ಸುರೇಶ್ ಅವರ ಮೇಲೆ ಚಾರ್ಜ್ ಶೀಟ್ ಸಲ್ಲಿಕೆಯಾಗಿರುವ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಯಾವುದೇ ಸಂಸ್ಥೆಗೆ ದೇಣಿಗೆ ನೀಡುವುದು ತಪ್ಪೇ? ಎಂದು ಕೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.