ರಾಮನಗರ: ಕಾವೇರಿ ನದಿಗೆ ಅಡ್ಡವಾಗಿ ಮೇಕೆದಾಟು ಯೋಜನೆಯನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿ, ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ್ ಕುಮಾರ್ ಶೆಟ್ಟಿ ಬಣದ ವತಿಯಿಂದ ರಾಮನಗರದಿಂದ ರಾಜಧಾನಿ ಬೆಂಗಳೂರಿನವರೆಗೆ ಶುಕ್ರವಾರ ಪಾದಯಾತ್ರೆ ಶುರುವಾಯಿತು.

ನಗರದ ಕೆಂಪೇಗೌಡ ವೃತ್ತದಲ್ಲಿ ಬೆಳಿಗ್ಗೆ ಜಮಾಯಿಸಿದ ಕಾರ್ಯಕರ್ತರು, ವೇದಿಕೆ ರಾಜ್ಯಾಧ್ಯಕ್ಷ ಶೆಟ್ಟಿ ನೇತೃತ್ವದಲ್ಲಿ ಸಮೀಪದ ಲಕ್ಷ್ಮೀ ವೆಂಕಟೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿದರು. ನಂತರ 'ನಮ್ಮ ನೀರು ನಮ್ಮ ಹಕ್ಕು' ಘೋಷಣೆಯೊಂದಿಗೆ ಪಾದಯಾತ್ರೆ ಆರಂಭಿಸಿದರು.

ಕೆಂಪೇಗೌಡ ವೃತ್ತದಿಂದ ಶುರುವಾದ ಪಾದಯಾತ್ರೆ ಐಜೂರು ವೃತ್ತ, ಕೆಂಗಲ್ ಹನುಮಂತಯ್ಯ ವೃತ್ತ, ಮುಖ್ಯರಸ್ತೆ, ಎಂ.ಜಿ. ರಸ್ತೆ, ವಾಟರ್ ಟ್ಯಾಂಕ್ ವೃತ್ತ, ಜೂನಿಯರ್ ಕಾಲೇಜು ರಸ್ತೆ, ಎಸ್.ಪಿ ಕಚೇರಿ ವೃತ್ತ ಹಾದು ಬೆಂಗಳೂರು–ಮೈಸೂರು ರಸ್ತೆ ತಲುಪಿ ರಾಜಧಾನಿಯತ್ತ ಸಾಗಿತು.

ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಬಂದಿದ್ದ ಕರವೇ ಕಾರ್ಯಕರ್ತರು ಸೇರಿದಂತೆ, ಇತರ ಕನ್ಮಡಪರ ಸಂಘಟನೆಗಳ ಪದಾಧಿಕಾರಿಗಳು ಮತ್ತು ಸದಸ್ಯರು ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದರು. ಮೇಕೆದಾಟು ಪರ ಘೋಷಣೆಗಳನ್ನು ಕೂಗಿದರು. ಯೋಜನೆ ಅನುಷ್ಠಾನಕ್ಕೆ ವಿಳಂಬ ಮಾಡುತ್ತಿರುವ ರಾಜ್ಯ ಸರ್ಕಾರ ಮತ್ತು ಅನುಮತಿ ನೀಡದೆ ಸತಾಯಿಸುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪಾದಯಾತ್ರೆಯುದ್ದಕ್ಕೂ ಕನ್ನಡ ಬಾವುಟಗಳು ರಾರಾಜಿಸಿದವು.

ಈ ವೇಳೆ ಸುದ್ದಿಗಾರರ ಜೊತೆ ಮಾತನಾಡಿದ ವೇದಿಕೆ ರಾಜ್ಯಾಧ್ಯಕ್ಷ ಪ್ರವೀಣ್ ಕುಮಾರ್ ಶೆಟ್ಟಿ, ಮೇಕೆದಾಟು ಅಣೆಕಟ್ಟು ನಿರ್ಮಾಣ ಯೋಜನೆ ವಿಷಯದಲ್ಲಿ ಪಕ್ಷಗಳು ರಾಜಕೀಯ ಬದಿಗಿಡಬೇಕು. ರಾಜ್ಯದ ಹಿತಾಸಕ್ತಿಗಾಗಿ ಪಕ್ಷಬೇಧ ಮರೆತು ಯೋಜನೆ ಜಾರಿಗೆ ಶ್ರಮಿಸಬೇಕು. ಕೇಂದ್ರ ಸರ್ಕಾರ ಸಹ ರಾಜಕೀಯ ಕಾರಣಕ್ಕೆ ಅನುಮತಿ ನೀಡದೆ ನಿರ್ಲಕ್ಷ್ಯ ಮಾಡದೆ ಕೂಡಲೇ ಅನುಮತಿ ಕೊಡಬೇಕು. ಈ ಕುರಿತು ರಾಜ್ಯ ಮತ್ತು ಕೇಂದ್ರ ಸರ್ಕಾರಗಳನ್ನು ಎಚ್ಚರಿಸುವುದಕ್ಕಾಗಿ ವೇದಿಕೆ ವತಿಯಿಂದ ಪಾದಯಾತ್ರೆ ಹಮ್ಮಿಕೊಂಡಿದ್ದೇವೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.