ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಿಂಗಾಯತ ಸಮಾಜಕ್ಕೆ ಸಿ.ಎಂ ನಂತರದ ಸ್ಥಾನ ನೀಡಲಿ: ರಂಭಾಪುರಿ ಸ್ವಾಮೀಜಿ ಆಗ್ರಹ

Published 14 ಮೇ 2023, 20:58 IST
Last Updated 14 ಮೇ 2023, 20:58 IST
ಅಕ್ಷರ ಗಾತ್ರ

ಬೆಂಗಳೂರು: ‘ವಿಧಾನಸಭೆ ಚುನಾವಣೆಯಲ್ಲಿ ಲಿಂಗಾಯತ ಸಮಾಜವು ಹೆಚ್ಚಿನ ಪ್ರಮಾಣದಲ್ಲಿ ಕಾಂಗ್ರೆಸ್‌ ಅನ್ನು ಬೆಂಬಲಿಸಿದೆ. ಸಚಿವ ಸಂಪುಟದಲ್ಲಿ ಮುಖ್ಯಮಂತ್ರಿಯ ನಂತರದ ಸ್ಥಾನವನ್ನು ವೀರಶೈವ ಲಿಂಗಾಯತ ಸಮಾಜಕ್ಕೇ ನೀಡಬೇಕು’ ಎಂದು ಬಾಳೆಹೊನ್ನೂರು ರಂಭಾಪುರಿ ಪೀಠದ ಪೀಠಾಧ್ಯಕ್ಷ ವೀರಸೋಮೆಶ್ವರ ಶಿವಾಚಾರ್ಯ ಸ್ವಾಮೀಜಿ ಒತ್ತಾಯಿಸಿದರು.

ನಗರದಲ್ಲಿ ಭಾನುವಾರ ಸುದ್ದಿಗಾರರ ಜೊತೆಗೆ ಮಾತನಾಡಿ, ‘ಕಾಂಗ್ರೆಸ್‌ಗೆ ಜನರೇ ಪ್ರಚಂಡ ಜಯ ತಂದುಕೊಟ್ಟಿದ್ದಾರೆ. ಪಕ್ಷವು ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳನ್ನು ಪ್ರಾಮಾಣಿಕವಾಗಿ ಜಾರಿಗೆ ತರಬೇಕು’ ಎಂದು ಒತ್ತಾಯಿಸಿದರು.

‘ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರು ಇಬ್ಬರೂ ಪಕ್ಷಕ್ಕಾಗಿ ದುಡಿದಿದ್ದಾರೆ. ಮುಖ್ಯಮಂತ್ರಿ ಯಾರು ಎಂಬುದನ್ನು ಆ ಪಕ್ಷದ ಹೈಕಮಾಂಡ್‌ ನಿರ್ಧಾರ ಕೈಗೊಳ್ಳಲಿದೆ. ನಾನು ಸ್ವಾಮೀಜಿಯಾಗಿ ಪ್ರತಿಕ್ರಿಯಿಸುವುದಿಲ್ಲ. ಯಾರೇ ಅಧಿಕಾರಕ್ಕೆ ಬಂದರೂ ಉತ್ತಮ ಆಡಳಿತ ನೀಡಬೇಕು’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT