ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾರಕಿಹೊಳಿ ಸಿಡಿ ಪ್ರಕರಣ: ವಾದಾಂಶ ಸಲ್ಲಿಕೆಗೆ ಕೊನೆ ಅವಕಾಶ

Published 1 ಡಿಸೆಂಬರ್ 2023, 23:45 IST
Last Updated 1 ಡಿಸೆಂಬರ್ 2023, 23:45 IST
ಅಕ್ಷರ ಗಾತ್ರ

ಬೆಂಗಳೂರು: ಶಾಸಕ ರಮೇಶ ಜಾರಕಿಹೊಳಿ ಸಿಡಿ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚನೆ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗೆ ಸಂಬಂಧಿಸಿದಂತೆ ಲಿಖಿತ ವಾದಾಂಶ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಕೊನೆಯದಾಗಿ ಎರಡು ವಾರಗಳ ಕಾಲಾವಕಾಶ ನೀಡಿದೆ.

ಎಸ್‌ಐಟಿ ರಚನೆಯ ಸಿಂಧುತ್ವ ಪ್ರಶ್ನಿಸಿ ಸಂತ್ರಸ್ತೆ ಹಾಗೂ ಇತರರು ಸಲ್ಲಿಸಿರುವ ಪ್ರತ್ಯೇಕ ರಿಟ್ ಅರ್ಜಿಗಳನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು, ಲಿಖಿತ ವಾದಾಂಶ ಸಲ್ಲಿಸಲು ಇನ್ನಷ್ಟು ಕಾಲಾವಕಾಶ ನೀಡುವಂತೆ ಕೋರಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ನ್ಯಾಯಪೀಠ, ‘ಈಗಾಗಲೇ ಸಾಕಷ್ಟು ಸಮಯ ನೀಡಲಾಗಿದೆ. ಆದರೂ ಲಿಖಿತ ವಾದಾಂಶ ಸಲ್ಲಿಸಲು ವಿಳಂಬ ಮಾಡಲಾಗುತ್ತಿದೆ’ ಎಂದು ಅಸಮಾಧಾನ ಸೂಚಿಸಿತು. ಅಂತಿಮವಾಗಿ ಎರಡು ವಾರಗಳ ಕಾಲಾವಕಾಶ ನೀಡಿ ವಿಚಾರಣೆಯನ್ನು ಇದೇ 15ಕ್ಕೆ ಮುಂದೂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT