ಶನಿವಾರ, 20 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಫೆ. 22 ರಂದು ಕೇಂದ್ರ ಜಲಶಕ್ತಿ ಸಚಿವರ ಜೊತೆ ರಮೇಶ ಜಾರಕಿಹೊಳಿ‌ ಚರ್ಚೆ

Last Updated 20 ಫೆಬ್ರುವರಿ 2021, 9:50 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ಹಲವು ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ದೆಹಲಿಯಲ್ಲಿ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ‌ ಸೋಮವಾರ (ಫೆ. 22) ಭೇಟಿ ಮಾಡಿ ಚರ್ಚೆ ನಡೆಸಲಿದ್ದಾರೆ.

ಅದಕ್ಕೂ ಮೊದಲು (ಫೆ.21), ದೆಹಲಿಯ ಕರ್ನಾಟಕ ಭವನದಲ್ಲಿ ಕೃಷ್ಣಾ, ಕಾವೇರಿ, ಮಹದಾಯಿ ಸೇರಿದಂತೆ ಅಂತರರಾಜ್ಯ ಜಲವಿವಾದಗಳ ಕುರಿತು ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ಪ್ರಕರಣಗಳಿಗೆ ಕುರಿತಂತೆ ಕಾನೂನು ತಜ್ಞರು ಮತ್ತು ತಾಂತ್ರಿಕ ಸಲಹೆಗಾರರ ಸಭೆಯಲ್ಲಿ ಜಾರಕಿಹೊಳಿ ಭಾಗವಹಿಸಲಿದ್ದಾರೆ.

ಸಚಿವರ ಜೊತೆ ಜಲಸಂಪನ್ಮೂಲ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್‌, ಕಾರ್ಯದರ್ಶಿ ಅನೀಲ್‌ ಕುಮಾರ್, ನೀರಾವರಿ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರು ಮತ್ತು ಹಿರಿಯ ಅಧಿಕಾರಿಗಳು ಈ ಸಭೆಗಳಲ್ಲಿ ಭಾಗವಹಿಸಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT