ಬೆಂಗಳೂರು: ಶಾಸಕ ರಮೇಶ ಜಾರಕಿಹೊಳಿ ಸಿ.ಡಿ ಪ್ರಕರಣದಲ್ಲಿ ವಿಶೇಷ ತನಿಖಾ ತಂಡ(ಎಸ್‌ಐಟಿ) ಸಿದ್ಧಪಡಿಸಿರುವ ವರದಿ ಸಲ್ಲಿಸಲು ಅನುಮತಿ ನೀಡಲು ಹೈಕೋರ್ಟ್ ನಿರಾಕರಿಸಿದೆ.

ಎಸ್‌ಐಟಿ ರಚನೆ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಷರತ್ತುಗಳಿಗೆ ಒಳಪಟ್ಟು ಆದೇಶ ಸಲ್ಲಿಸಲು ಅವಕಾಶ ನೀಡಬೇಕು ಎಂದು ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ ಕೋರಿದರು. ಇದಕ್ಕೆ ಆಕ್ಷೇಪ ಸಲ್ಲಿಸಿದ ಸಂತ್ರಸ್ತೆ ಪರ ವಕೀಲೆ ಇಂದಿರಾ ಜೈಸಿಂಗ್, ‘ಎಸ್‌ಐಟಿ ರಚನೆಯ ಸಿಂಧುತ್ವವನ್ನೇ ಅರ್ಜಿದಾರರು ಪ್ರಶ್ನಿಸಿದ್ದಾರೆ. ನ್ಯಾಯಾಲಯ ಈ ಪ್ರಕರಣ ಇತ್ಯರ್ಥಪಡಿಸುವ ತನಕ ವರದಿ ಸಲ್ಲಿಸಲು ಅನುಮತಿ ನೀಡಬಾರದು’ ಎಂದು ಕೋರಿದರು.

ವರದಿ ಸಲ್ಲಿಸಲು ಅನುಮತಿ ನೀಡುವ ಮುನ್ನ ಹಲವು ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳುವ ಅಗತ್ಯವಿದೆ ಎಂದು ತಿಳಿಸಿದ ಪೀಠ, ವಿಚಾರಣೆಯನ್ನು ಅ.7ಕ್ಕೆ ಮುಂದೂಡಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.