ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ರಾಮೇಶ್ವರಂ ಕೆಫೆ ಸ್ಫೋಟ: ಶಂಕಿತನ ಭಾವಚಿತ್ರ ಬಿಡುಗಡೆ ಮಾಡಿದ ಎನ್ಐಎ

Published 9 ಮಾರ್ಚ್ 2024, 13:54 IST
Last Updated 9 ಮಾರ್ಚ್ 2024, 13:54 IST
ಅಕ್ಷರ ಗಾತ್ರ

ಬೆಂಗಳೂರು ನಗರದ ದಿ ರಾಮೇಶ್ವರಂ ಕೆಫೆಯಲ್ಲಿ ನಡೆದಿದ್ದ ಬಾಂಬ್ ಸ್ಫೋಟ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳವು ಶಂಕಿತ ಆರೋಪಿಯ ಭಾವಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದೆ. ಸಿ.ಸಿ.ಟಿ.ವಿ ಕ್ಯಾಮೆರಾದ ದೃಶ್ಯಾವಳಿ ಆಧಾರದಲ್ಲಿ ಆರೋಪಿಯ ಭಾವಚಿತ್ರಗಳನ್ನು ಬಿಡುಗಡೆ ಮಾಡಲಾಗಿದೆ. ಟಿ–ಶರ್ಟ್‌, ಜೀನ್ಸ್‌ ಪ್ಯಾಂಟ್ ಧರಿಸಿರುವ ಆರೋಪಿಯು ತಲೆಗೆ ಕ್ಯಾಪ್ ಹಾಗೂ ಮುಖಕ್ಕೆ ಮಾಕ್ಸ್ ಹಾಕಿರುವುದುನ್ನು ಕಾಣಬಹುದಾಗಿದೆ. ಈ ಕುರಿತು ಸಾರ್ವಜನಿಕ ಪ್ರಕಟಣೆ ಹೊರಡಿಸಿರುವ ಎನ್‌ಐಎ, ಮಾಹಿತಿ ನೀಡಿದವರ ಹೆಸರನ್ನು ಗೋಪ್ಯವಾಗಿ ಇಡಲಾಗುವುದು ಎಂದು ತಿಳಿಸಿದೆ. ಶಂಕಿತನ ಸುಳಿವು ಲಭಿಸಿದ ಕೂಡಲೇ 08029510900, 8904241100 ಹಾಗೂ info.blr.nia@gov.inಗೆ ಮಾಹಿತಿ ನೀಡಬಹುದು ಎಂದು ಅಧಿಕಾರಿಗಳು ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT