ಸೋಮವಾರ, 22 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮೇಶ್ವರಂ ಕೆಫೆ: ತಪ್ಪಿತಸ್ಥರನ್ನು ಬಂಧಿಸಿ ಉಗ್ರ ಶಿಕ್ಷೆ ನೀಡಿ– ಬೊಮ್ಮಾಯಿ

Published 1 ಮಾರ್ಚ್ 2024, 15:03 IST
Last Updated 1 ಮಾರ್ಚ್ 2024, 15:03 IST
ಅಕ್ಷರ ಗಾತ್ರ

ಬೆಂಗಳೂರು: ರಾಮೇಶ್ವರಂ ಕೆಫೆ ಬಳಿ ಸ್ಪೋಟವಾಗಿದ್ದು ರಾಜ್ಯದ ನಾಗರೀಕರನ್ನು ಭಯಭೀತರನ್ನಾಗುವಂತೆ ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಶಾಸಕ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ. 

ಬೆಂಗಳೂರಿನ ರಾಮೇಶ್ವರಂ ಕೆಫೆ ಬಳಿ ಸ್ಪೋಟವಾಗಿದ್ದು ರಾಜ್ಯದ ನಾಗರಿಕರನ್ನು ಭಯಭೀತರನ್ನಾಗುವಂತೆ ಮಾಡಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಆಗಂತುಕರ ಚಟುವಟಿಕೆಗಳು ಹೆಚ್ಚಾಗುತ್ತಿದ್ದು, ಇದಕ್ಕೆ ರಾಜ್ಯ ಸರ್ಕಾರದ ವರ್ತನೆಗಳೂ ಇಂತಹ ಘಟನೆಗಳು ಹೆಚ್ಚಾಗಲು ಕಾರಣವಾಗುತ್ತಿದೆ. ರಾಜ್ಯ ಸರ್ಕಾರ ಇವತ್ತಿನ ಸ್ಪೋಟವನ್ನು ನಿರ್ಲಕ್ಷ್ಯ ಮಾಡದೇ ಗಂಭೀರವಾಗಿ ತನಿಖೆ ನಡೆಸಿ ತಪ್ಪಿತಸ್ಥರನ್ನು ಬಂಧಿಸಿ ಉಗ್ರ ಶಿಕ್ಷೆ ನೀಡಬೇಕು.

ರಾಜ್ಯ ಸರ್ಕಾರ ಇವತ್ತಿನ ಸ್ಪೋಟವನ್ನು ನಿರ್ಲಕ್ಷ್ಯ ಮಾಡದೇ ಗಂಭೀರವಾಗಿ ತನಿಖೆ ನಡೆಸಿ ತಪ್ಪಿತಸ್ಥರನ್ನು ಬಂಧಿಸಿ ಉಗ್ರ ಶಿಕ್ಷೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT