ಬೆಂಗಳೂರು: ನಟಿ, ಮಾಜಿ ಸಂಸದೆ ರಮ್ಯಾ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಚಿತ್ರ ಹಾಗೂ ಬೆದರಿಕೆ ಸಂದೇಶ ಕಳುಹಿಸಿದ್ದ ಪ್ರಕರಣ ಸಂಬಂಧ ತನಿಖೆ ತೀವ್ರಗೊಳಿಸಿರುವ ಸಿಸಿಬಿ ಪೊಲೀಸರು, ಮೊಬೈಲ್ನಿಂದ ಅಳಿಸಿ ಹಾಕಿದ್ದ ದತ್ತಾಂಶ ಮರುಸಂಗ್ರಹಿಸಲು 12 ಆರೋಪಿಗಳ ಮೊಬೈಲ್ ಫೋನ್ಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ (ಎಫ್ಎಸ್ಎಲ್) ಕಳುಹಿಸಿದ್ದಾರೆ.

ಆರೋಪಿಗಳ ಖಾತೆಗಳು, ಸಂದೇಶಗಳನ್ನು ಮರು ಸಂಗ್ರಹಿಸಬೇಕಿದ್ದು, ವರದಿ ಬಂದ ಬಳಿಕ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಿದ್ದಾರೆ. ಮಹಿಳೆಯ ಘನತೆ, ಗೌರವಕ್ಕೆ ಧಕ್ಕೆಯಾಗುವಂತೆ ಪೋಸ್ಟ್ ಮಾಡಿದ ಪ್ರಕರಣ ಸಂಬಂಧ ಈವರೆಗೂ 12 ಆರೋಪಿಗಳನ್ನು ಸಿಸಿಬಿ ಬಂಧಿಸಿದೆ. ಸದ್ಯ ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ. ಜಾಮೀನಿಗಾಗಿ ಪ್ರಯತ್ನಿಸುತ್ತಿದ್ದಾರೆ.

ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಮತ್ತು ಇತರ ಆರು ಆರೋಪಿಗಳಿಗೆ ಜಾಮೀನು ನೀಡಿದ್ದ ಕರ್ನಾಟಕ ಹೈಕೋರ್ಟ್ ಕ್ರಮಕ್ಕೆ ಸುಪ್ರೀಂ ಕೋರ್ಟ್ ಛೀಮಾರಿ ಹಾಕಿತ್ತು. ಈ ಬೆಳವಣಿಗೆಯ ನಂತರ ರಮ್ಯಾ ಅವರು ತಮ್ಮ ‘ಎಕ್ಸ್’ ಖಾತೆಯಲ್ಲಿ ಪೋಸ್ಟ್ ಮಾಡಿ ‘ಭಾರತದ ಸಾಮಾನ್ಯ ಜನರಿಗೆ ಸುಪ್ರೀಂ ಕೋರ್ಟ್ ಒಂದು ಭರವಸೆಯ ಕಿರಣ ಇದ್ದಂತೆ. ರೇಣುಕಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಲಿದೆ ಎನ್ನುವ ನಿರೀಕ್ಷೆಯಲ್ಲಿ’ ಎಂದು ಅದರಲ್ಲಿ ಉಲ್ಲೇಖಿಸಿದ್ದರು.

ರಮ್ಯಾ ಅವರು ಈ ಪೋಸ್ಟ್ ಹಾಕಿದ ಬಳಿಕ ಅವರ ಇನ್ಸ್ಟಾಗ್ರಾಂ ಖಾತೆಗಳಿಗೆ ಅವಹೇಳನಕಾರಿ ಸಂದೇಶಗಳು ಬಂದಿದ್ದವು. ಸಂದೇಶಗಳ ಸ್ಕ್ರೀನ್ಶಾಟ್ ಅನ್ನು ರಮ್ಯಾ ತೆಗೆದುಕೊಂಡು ಪೊಲೀಸರಿಗೆ ದೂರು ನೀಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.