ಗುರುವಾರ, 30 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವರಾಜ್‌ ಕುಮಾರ್‌ ದಂಪತಿ ಭೇಟಿಯಾದ ಸುರ್ಜೇವಾಲಾ

Published 23 ಮೇ 2023, 16:21 IST
Last Updated 23 ಮೇ 2023, 16:21 IST
ಅಕ್ಷರ ಗಾತ್ರ

ಬೆಂಗಳೂರು: ನಟ ಶಿವರಾಜ್‌ ಕುಮಾರ್ ಅವರನ್ನು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಮಂಗಳವಾರ ಬೆಳಿಗ್ಗೆ ಭೇಟಿ ಮಾಡಿ ಮಾತುಕತೆ ನಡೆಸಿದರು.

ಮಾನ್ಯತಾ ಟೆಕ್ ಪಾರ್ಕ್‌ನಲ್ಲಿರುವ ಶಿವರಾಜ್ ಕುಮಾರ್ ನಿವಾಸಕ್ಕೆ ತೆರಳಿದ ಸುರ್ಜೇವಾಲಾ, ಶಿವರಾಜ್ ಕುಮಾರ್– ಗೀತಾ ಶಿವರಾಜ್‌ ಕುಮಾರ್‌ ದಂಪತಿಗೆ ಶುಭಾಶಯ ಕೋರಿದರು.

ಸಿದ್ದರಾಮಯ್ಯ, ಜಗದೀಶ ಶೆಟ್ಟರ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರ ಶಿವರಾಜ್ ಕುಮಾರ್ ದಂಪತಿ ಪ್ರಚಾರ ಮಾಡಿದ್ದರು.

ಸಂಪುಟ ಸೇರಿದ ಸಚಿವರ ಮೊದಲ ಪಟ್ಟಿಯಲ್ಲಿ ಸ್ಥಾನ ಸಿಗದ ಕಾರಣಕ್ಕೆ ಗೀತಾ ಶಿವರಾಜ್‌ ಕುಮಾರ್‌ ಅವರ ಸಹೋದರ, ಸೊರಬ ಕ್ಷೇತ್ರದ ಶಾಸಕ ಮಧು ಬಂಗಾರಪ್ಪ ಅವರು ತಮ್ಮ ಆಪ್ತರ ಬಳಿ ಅಸಮಾಧಾನ ವ್ಯಕ್ತಪಡಿಸಿದ್ದರು. ಅವರು ಹೊಸ ಸರ್ಕಾರದ ಪ್ರಮಾಣವಚನ ಕಾರ್ಯಕ್ರಮಕ್ಕೂ ಗೈರಾಗಿದ್ದರು. ಶಿವರಾಜ್ ಕುಮಾರ್ ಕೂಡಾ ಬೇಸರಗೊಂಡಿದ್ದರು ಎನ್ನಲಾಗಿತ್ತು.

ಸುದ್ದಿಗಾರರ ಜೊತೆ ಮಂಗಳವಾರ ಮಾತನಾಡಿದ ಮಧು ಬಂಗಾರಪ್ಪ, ‘ಸಚಿವ ಸ್ಥಾನ ನೀಡುವುದು ವರಿಷ್ಠರಿಗೆ ಬಿಟ್ಟ ವಿಚಾರ. ಸಚಿವ ಸ್ಥಾನ ನಾನು ಕೇಳಿಯೂ ಇಲ್ಲ, ಅವರು (ವರಿಷ್ಠರು) ಹೇಳಿಯೂ ಇಲ್ಲ’ ಎಂದರು.

‘ನಾನು ಪ್ರಣಾಳಿಕೆ ಸಮಿತಿಯ ಉಪಾಧ್ಯಕ್ಷನಾಗಿದ್ದೆ. ನಾವು ಕೊಟ್ಟಿರುವ ಗ್ಯಾರಂಟಿಗಳನ್ನು ಈಡೇರಿಸುವುದು ಈಗ ನಮ್ಮ ಕರ್ತವ್ಯ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT