ರಾಣೆಬೆನ್ನೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ 50 ವರ್ಷಗಳ ರಾಜಕೀಯ ಜೀವನದ ಸಾರ್ಥಕತೆ ಆಚರಿಸಲು ಮೇ 9 ರಂದು ಚಿತ್ರದುರ್ಗದಲ್ಲಿ ಅಭಿಮಾನೋತ್ಸವ ಕಾರ್ಯಕ್ರಮ ನಡೆಯಲಿದೆ. ಚಿತ್ರದುರ್ಗಕ್ಕೆ ರಾಣೆಬೆನ್ನೂರಿನಿಂದ 10 ಸಾವಿರ ಅಭಿಮಾನಿಗಳು ತೆರಳಲಿದ್ದಾರೆ. 170 ವಾಹನ ಬಿಡಲಾಗುವುದು ಎಂದು ಮಾಜಿ ಶಾಸಕ ಅರುಣಕುಮಾರ ಪೂಜಾರ ಹೇಳಿದರು.

ಇಲ್ಲಿನ ಬಿಜೆಪಿ ಕಾರ್ಯಾಲಯದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದ ಅವರು, ಯಡಿಯೂರಪ್ಪ ಅವರು ಜನನಾಯಕರು. ಅವರೇ ಕಟ್ಟಿ ಬೆಳೆಸಿದ ಪಕ್ಷ ಬಿಜೆಪಿ. ರಾಜ್ಯದಲ್ಲಿ ಬಿಜೆಪಿ ಎಂದರೆ ಬಿ.ಎಸ್.ವೈ. 50 ವರ್ಷಗಳ ಕಾಲ ರಾಜ್ಯ ಸುತ್ತಿದ್ದಾರೆ. ರೈತರ ಪರ ಹೋರಾಡಿ, ದೀನದಲಿತರಿಗೆ ನ್ಯಾಯ ಒದಗಿಸಿ ಸಾಮಾಜಿಕ ನ್ಯಾಯಕ್ಕಾಗಿ ಹೋರಾಡಿದವರು. ಅವರ ಜೀವನ ಮತ್ತು ಸಮಾಜಸೇವೆ ಕುರಿತು ಅವರ ಅಭಿಮಾನೋತ್ಸವ ನಡೆಯಲಿದೆ. ಅಭಿ ಮಾನದಿಂದ ಕಾರ್ಯಕ್ರಮ ನಡೆಯಲಿದೆ. ಇದರಲ್ಲಿ ಯಾವುದೇ ರಾಜಕೀಯ ಸ್ವಾರ್ಥ ವಿಲ್ಲ. ಅವರ ಚಿಂತನೆಗಳು ಎಲ್ಲರಿಗೂ ಮಾರ್ಗದರ್ಶನವಾಗಲಿದೆ ಎಂದರು.

ಯಡಿಯೂರಪ್ಪ ಅವರ ಕೊಡುಗೆಯನ್ನು ಎಲ್ಲ ವರ್ಗದವರೂ ಪ್ರಶಂಸಿಸು ತ್ತಾರೆ. ಇದೊಂದು ಐತಿಹಾಸಿಕ ಕಾರ್ಯಕ್ರಮವಾಗಲಿದೆ. ದೇಶದಲ್ಲಿಯೇ ಕೃಷಿ ಬಜೆಟ್ ಮಂಡಿಸಿದ ಮೊದಲಿಗರು. ರೈತರ ಪರ, ನೀರಾವರಿ, ರಸ್ತೆ ಅಭಿವೃದ್ದಿ, ಬಗರ್ ಹುಕುಂ, ಆಶ್ರಯಮನೆ, ಭಾಗ್ಯ ಲಕ್ಷ್ಮೀ ಯೋಜನೆ ಸೇರಿದಂತೆ ಅನೇಕ ಜನಪರ ಕಾರ್ಯಕ್ರಮಗಳನ್ನು ಕೊಡುವ ಮೂಲಕ ಸಾಕಷ್ಟು ಕಲ್ಯಾಣ ಕೆಲಸ ಮಾಡಿದ್ದಾರೆ. ಅಲ್ಲದೇ ರಾಣೆಬೆನ್ನೂರಿನ 24/7 ಕುಡಿಯುವ ನೀರು, ಹೂಲಿಹಳ್ಳಿ ಬಳಿ ಮೇಗಾ ಮಾರು ಕಟ್ಟೆ ನಿರ್ಮಾಣಕ್ಕೆ ಸಾಕಷ್ಟು ಅನುದಾನ ಒದಗಿಸಿದ್ದಾರೆ ಎಂದು ಹೇಳಿದರು.

ರಾಜ್ಯ ಗೃಹ ಸಚಿವ ಅಮಿತ್ ಶಾ ಕಾರ್ಯಕ್ರಮ ಉದ್ಘಾಟಿಸುವರು. ನಾಡಿನ ಎಲ್ಲಾ ಮಠಾಧೀಶರು, ಮಾಜಿ ಮುಖ್ಯಮಂತ್ರಿಗಳು, ಸಚಿವರು ಮತ್ತು ಗಣ್ಯಮಾನ್ಯರು, ಸಾಹಿತಿಗಳು, ಕಲಾವಿದರು, ರೈತರು, ಅಭಿಮಾನಿಗಳು ಭಾಗವಹಿಸಲಿದ್ದಾರೆ ಎಂದರು.

ಬಿಜೆಪಿ ನಗರ ಘಟಕದ ಅಧ್ಯಕ್ಷ ಮಂಜುನಾಥ ಕಾಟಿ ಮಾತನಾಡಿದರು. ಗ್ರಾಮೀಣ ಘಟಕದ ಅಧ್ಯಕ್ಷ ಸುಭಾಷ ಶೇಷಗಿರಿ, ಮಂಜುನಾಥ ಓಲೇಕಾರ, ನಿಂಗರಾಜ ಕೋಡಿಹಳ್ಳಿ, ಮಲ್ಲಿಕಾರ್ಜುನ ಅಂಗಡಿ, ಸಿದ್ದು ಚಿಕ್ಕಬಿದರಿ, ವಿಷ್ಣು ಜಿಂಗಾಡೆ, ಪರಮೇಶಪ್ಪ ಗೌಳಿ, ಪ್ರಕಾಶ ಪೂಜಾರ, ಅಮೋಘ ಬದಾಮಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-22-23682871

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.