‘ಶಿಷ್ಟಾಚಾರ: ನಿಯಮ ಉಲ್ಲಂಘನೆ’
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಶಿಷ್ಟಾಚಾರ ಸೌಲಭ್ಯ ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತ ನೇತೃತ್ವದ ತಂಡವು ಪೊಲೀಸರು ಸೇರಿದಂತೆ ಹತ್ತು ಸಿಬ್ಬಂದಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ.
ರನ್ಯಾ ಅವರ ಮಲತಂದೆಯೂ ಆಗಿರುವ ಐಪಿಎಸ್ ಅಧಿಕಾರಿ ರಾಮಚಂದ್ರ ರಾವ್ ಅವರಿಗೆ ಶಿಷ್ಟಾಚಾರ ನಿಯಮಗಳಡಿ ಒದಗಿಸುತ್ತಿದ್ದ ಸೌಲಭ್ಯವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದರು ಎಂಬುದು ವಿಚಾರಣೆ ವೇಳೆ ಗೊತ್ತಾಗಿದೆ. ತನಿಖಾ ತಂಡ ಸರ್ಕಾರಕ್ಕೆ ಪ್ರಾಥಮಿಕ ವರದಿ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದೆ ಎಂದು ಮೂಲಗಳು ತಿಳಿಸಿವೆ.