ಬೆಂಗಳೂರು: ಮಹಿಳೆಯೊಬ್ಬರ ಮೇಲಿನ ಅತ್ಯಾಚಾರ ಆರೋಪ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಈ ಸಂಬಂಧ ಮುನಿರತ್ನ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಪುರಸ್ಕರಿಸಿ ಮಂಗಳವಾರ ಆದೇಶಿಸಿದರು.

‘₹1 ಲಕ್ಷ ಮೊತ್ತದ ವೈಯಕ್ತಿಕ ಬಾಂಡ್ ಮತ್ತು ಇಷ್ಟೇ ಮೌಲ್ಯಕ್ಕೆ ಇಬ್ಬರ ಭದ್ರತೆ ಒದಗಿಸಬೇಕು. ಪ್ರಾಸಿಕ್ಯೂಷನ್ ಸಾಕ್ಷಿಗಳಿಗೆ ಬೆದರಿಕೆ ಹಾಕಬಾರದು. ತನಿಖಾಧಿಕಾರಿ ಸೂಚಿಸಿದಾಗ ವಿಚಾರಣೆಗೆ ಹಾಜರಾಗಬೇಕು. ಯಾವುದೇ ರೀತಿಯಲ್ಲೂ ತನಿಖೆ ಮತ್ತು ಸಾಕ್ಷ್ಯ ತಿರುಚುವ ಕೃತ್ಯ ಮತ್ತು ಇಂತಹುದೇ ಅಪರಾಧದಲ್ಲಿ ಭಾಗಿಯಾಗುವಂತಿಲ್ಲ. ವಿಚಾರಣಾ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸುವವರೆಗೆ ಅಥವಾ ಮೂರು ತಿಂಗಳವರೆಗೆ ಪ್ರತಿ ತಿಂಗಳ ಭಾನುವಾರದಂದು ಬೆಳಿಗ್ಗೆ 9 ರಿಂದ ಸಂಜೆ 5ರ ನಡುವೆ ಸಂಬಂಧಿಸಿದ ಪೊಲೀಸ್ ಠಾಣೆಗೆ ತೆರಳಿ ಸಹಿ ಹಾಕಬೇಕು. ನ್ಯಾಯಾಲಯದ ಅನುಮತಿ ಪಡೆಯದೇ ನ್ಯಾಯಾಲಯದ ವ್ಯಾಪ್ತಿಯಿಂದ ಹೊರಗೆ ಹೋಗುವಂತಿಲ್ಲ’ ಎಂಬ ಷರತ್ತುಗಳನ್ನು ವಿಧಿಸಲಾಗಿದೆ.

ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಮುನಿರತ್ನ ಸೇರಿದಂತೆ ಆರು ಮಂದಿಯ ವಿರುದ್ಧ ರಾಮನಗರ ಜಿಲ್ಲೆಯ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಜಾತಿನಿಂದನೆ ಮತ್ತು ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿದ ಮತ್ತೆರಡು ಪ್ರತ್ಯೇಕ ಪ್ರಕರಣಗಳಲ್ಲಿ ಮುನಿರತ್ನ ಅವರಿಗೆ ಈಗಾಗಲೇ ಜಾಮೀನು ಮಂಜೂರಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.